- ಆಗ್ನೇಯ ಶಿಕ್ಷಕರ ಕ್ಷೇತ್ರ ಶೇ.92.93, ನೈಋತ್ಯ- ಶೇ.87.74, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.95 ಮತದಾನ
ಕನ್ನಡಪ್ರಭ ವಾರ್ತೆ, ದಾವಣಗೆರೆ ಕರ್ನಾಟಕ ವಿಧಾನದ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥಿತವಾಗಿ ಮತ ಚಲಾವಣೆಯಾಗಿದೆ.
ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶೇ.92.93, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶೇ.87.74 ಹಾಗೂ ಪದವೀಧರರ ಕ್ಷೇತ್ರಕ್ಕೆ ಶೇ.80.95ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ತಿಳಿಸಿದ್ದಾರೆ.
ಅದೇ ರೀತಿ ನೈಋತ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕು ಸೇರಿದ್ದು 4288 ಪುರುಷ, 2270 ಮಹಿಳೆಯರು ಸೇರಿ ಒಟ್ಟು 6558 ಮತದಾರರಲ್ಲಿ 8 ಮತಗಟ್ಟೆಗಳಿಂದ 3545 ಪುರುಷ, 1764 ಮಹಿಳೆಯರು ಸೇರಿ ಒಟ್ಟು 5309 ಮತ ಚಲಾಯಿಸಿದ್ದು, ಶೇ.80.95ರಷ್ಟು ಮತದಾನವಾಗಿದೆ. ಮತ ಎಣಿಕೆಯು ಜೂ.6ರಂದು ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
- - - -3ಕೆಡಿವಿಜಿ16, 17, 18, 19:ದಾವಣಗೆರೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದರು. -3ಕೆಡಿವಿಜಿ20:
ದಾವಣಗೆರೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಮತಗಟ್ಟೆಗೆ ಭೇಟಿ ನೀಡಿ, ವ್ಯವಸ್ಥೆಗಳ ಪರಿಶೀಲಿಸಿದರು.