ಎಲ್ಲ ಬ್ಯಾಂಕ್‌ಗಳಿಗೆ ನಿಗದಿತ ಗುರಿ ನೀಡಿ: ಡಾ. ದಿಲೀಷ್ ಶಶಿ

KannadaprabhaNewsNetwork |  
Published : Sep 08, 2026, 02:45 AM IST
 | Kannada Prabha

ಸಾರಾಂಶ

2026ರ ಜೂನ್ ತ್ರೈಮಾಸಿಕ ಅಂತ್ಯದಲ್ಲಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಒಟ್ಟು ₹27,262 ಕೋಟಿ ಠೇವಣಿ ಸಂಗ್ರಹ ಮತ್ತು ₹12778 ಕೋಟಿ ಸಾಲ ವಿತರಣೆ ಮಾಡಿದ್ದು, ಸಾಲ ಮತ್ತು ಠೇವಣಿ ಅನುಪಾತ ಶೇ. 46.87 ಮಾತ್ರ ಇದೆ.

ಕಾರವಾರ: ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಸಾಲ ಮತ್ತು ಠೇವಣಿ ಅನುಪಾತ ಹೆಚ್ಚಿಸಲು ಎಲ್ಲ ಬ್ಯಾಂಕ್‌ಗಳಿಗೆ ನಿಗದಿತ ಗುರಿ ನೀಡುವುದರ ಜತೆಗೆ ಗುರಿ ಸಾಧಿಸಲು ಕ್ರಿಯಾಯೋಜನೆ ರೂಪಿಸುವಂತೆ ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣಿ(ಲೀಡ್‌) ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿನ ಎಲ್ಲ ಬ್ಯಾಂಕ್‌ಗಳ ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗದಿತ ಗುರಿ ಸಾಧಿಸಲು, ವಿವಿಧ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲಿಸಿ, ಆದ್ಯತೆಯ ಮೇಲೆ ಸಾಲಗಳನ್ನು ವಿತರಿಸುವ ಮೂಲಕ ಬ್ಯಾಂಕ್‌ಗಳು ಸಾಲ ಮತ್ತು ಠೇವಣಿ ಅನುಪಾತದಲ್ಲಿ ನಿಗದಿತ ಗುರಿ ಸಾಧಿಸಲು ಕ್ರಮವಹಿಸುವಂತೆ ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಬ್ಯಾಂಕ್‌ಗಳಿಗೆ ಸಲ್ಲಿಕೆಯಾಗದೇ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ಬ್ಯಾಂಕ್‌ಗಳಿಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದ ಅವರು, ಯೋಜನೆಗಳ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ಪಡೆದು ಆರ್ಥಿಕವಾಗಿ ಸದೃಢವಾಗುವಂತೆ ಮಾಡುವುದು ಯೋಜನೆಗಳ ಅನುಷ್ಠಾನ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದರು.

2026ರ ಜೂನ್ ತ್ರೈಮಾಸಿಕ ಅಂತ್ಯದಲ್ಲಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಒಟ್ಟು ₹27,262 ಕೋಟಿ ಠೇವಣಿ ಸಂಗ್ರಹ ಮತ್ತು ₹12778 ಕೋಟಿ ಸಾಲ ವಿತರಣೆ ಮಾಡಿದ್ದು, ಸಾಲ ಮತ್ತು ಠೇವಣಿ ಅನುಪಾತ ಶೇ. 46.87 ಮಾತ್ರ ಇದ್ದು, ಪ್ರಸಕ್ತ ವರ್ಷದಲ್ಲಿ ಈ ಅನುಪಾತವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್‌ಗಳು ಪ್ರತ್ಯೇಕವನ್ನು ಯೋಜನೆಯನ್ನು ರೂಪಿಸಿ ನಿಗದಿತ ಗುರಿ ಸಾಧಿಸುವಂತೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಿಗೆ ಬ್ಯಾಂಕ್ ಗಳಿಂದ ನೀಡುತ್ತಿರುವ ಸಾಲಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಯಿತು.

ಜಿಪಂ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಕೆನರಾ ಬ್ಯಾಂಕ್ ಪ್ರಾದೇಶಿಕ ಮ್ಯಾನೇಜರ್ ನಾಗರಾಜ್, ನಬಾರ್ಡ್ ಬ್ಯಾಂಕ್ ಮೆನೇಜರ್ ಸುಶೀಲ್, ಲೀಡ್ ಬ್ಯಾಂಕ್ ಮ್ಯಾನೇಜರ್ ರಾಜಪ್ಪ, ಲೀಡ್ ಜಿಲ್ಲಾ ಅಧಿಕಾರಿ ಮೋನಿ ರಾಜ್ ಬ್ರಹ್ಮ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಎಲ್ಲ ಬ್ಯಾಂಕ್‌ಗಳ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನದಲ್ಲಿ ಶರಣರ ತತ್ವಾದರ್ಶ ಅಳವಡಿಸಿಕೊಳ್ಳಿ: ಡಾ. ಅನ್ನದಾನೀಶ್ವರ ಶ್ರೀಗಳು
ಯಕ್ಷೋತ್ಸವ ತಾಳಮದ್ದಲೆ ಸ್ಪರ್ಧೆಯಲ್ಲಿ ೨೭ ತಂಡ ಭಾಗಿ