ದೊಡ್ಡಬಳ್ಳಾಪುರ: ತಾಲೂಕಿನ ಹೆಗ್ಗಡಿಹಳ್ಳಿ, ಮೇಳೇಕೋಟೆ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು ₹2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಶನಿವಾರ ಚಾಲನೆ ನೀಡಿದರು.
ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಗ್ರಾಮಗಳಲ್ಲಿ ₹21 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ, ಎನ್.ಆರ್.ಎಲ್.ಎಂ ಭವನದಲ್ಲಿ ವಿಶೇಷ ಚೇತನರ ಉಪಯೋಗಕ್ಕಾಗಿ ರ್ಯಾಂಪ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹34.99 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಶುದ್ಧ ಕುಡಿಯುವ ನೀರು ಘಟಕ ಯಂತ್ರೋಪಕರಣ ಅಳವಡಿಕೆಗೆ ಚಾಲನೆ ನೀಡಿದರು.ಘಾಟಿ ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ:
ಬಳಿಕ ಮಾತನಾಡಿದ ಸಚಿವರು, ಒಕ್ಕಲು ಮಕ್ಕಳಾದ ನಾವು ಪಶು ಸಂಪತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಘಾಟಿ ಅಭಿವೃದ್ಧಿ ಪ್ರಾಧಿಕಾರ ಉತ್ತಮ ಕೆಲಸ ಮಾಡುತಿದ್ದು ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲು ಬದ್ದನಾಗಿದ್ದು, ತಮ್ಮ ತಾತ ತಂದೆಯ ಕಾಲದಲ್ಲಿ ಜಾತ್ರೆಗೆ ಭಾಗವಹಿಸುತಿದ್ದುದನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಪಂ ಕಾರ್ಯನಿರ್ವಹಣಾಧಿಕಾರಿ ಮುನಿರಾಜು, ಧಾರ್ಮಿಕ ದತ್ತಿ ಸಹಾಯಕ ನಿರ್ದೇಶಕ ದಿನೇಶ್, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಂಗಣ್ಣ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ವಿಜೇತ ರಾಸುಗಳ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಬಹುಮಾನ ವಿತರಿಸಿದರು.
1ಕೆಡಿಬಿಪಿ3-