ಅಧ್ಯಾಪಕರ ಹಕ್ಕು,ಹಿತಾಸಕ್ತಿ ರಕ್ಷಣೆಗೆ ಸಂಘ ಬದ್ಧ

KannadaprabhaNewsNetwork |  
Published : Nov 05, 2026, 02:30 AM IST
ಫೋಟೋವಿವರ- (4ಎಚ್ಪಿಟಿ6)ಕನ್ನಡ ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘದಿಂದ ನಡೆದ 2025-26 ನೇ ಸಾಲಿನ ವಾರ್ಷಿಕ ಸಭೆ ಹಾಗೂ ನಿವೃತ್ತಿ ಹೊಂದಿರುವ ಮತ್ತು ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಾಪಕರ ಸಂಘದ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ ರಂಜೇರೆ ಮಾತನಾಡಿದರು | Kannada Prabha

ಸಾರಾಂಶ

ಅಧ್ಯಾಪಕರ ಹಕ್ಕು ಮತ್ತು ಹಿತಾಸಕ್ತಿಗಳ ರಕ್ಷಣೆ ಸಂಘದ ಪ್ರಮುಖ ಧ್ಯೇಯೋದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಂಘ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ.

ಹೊಸಪೇಟೆ: ಸಂಘಗಳು ಹುಟ್ಟಿಕೊಳ್ಳುವುದೇ ಆಯಾ ಸಮುದಾಯಗಳ ಹಿತಾಸಕ್ತಿ ಕಾಪಾಡುವ ಉದ್ದೇಶ, ಕನ್ನಡ ವಿಶ್ವವಿದ್ಯಾಲಯದ ಅಧ್ಯಾಪಕರ ಹಕ್ಕು ಮತ್ತು ಹಿತಾಸಕ್ತಿ ರಕ್ಷಿಸುವ ಉದ್ದೇಶದಿಂದ ಅಧ್ಯಾಪಕರ ಸಂಘ ಸ್ಥಾಪನೆಯಾಗಿದೆ ಎಂದು ಅಧ್ಯಾಪಕರ ಸಂಘದ ಉಪಾಧ್ಯಕ್ಷ ಡಾ.ಅಶೋಕ್ ಕುಮಾರ ರಂಜೇರೆ ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘದಿಂದ ವಿವಿಯ ಡಾ. ರಾಜ್ಕುಮಾರ್ ಹಾಲ್ ಮಂಟಪ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ವಾರ್ಷಿಕ ಸಭೆ ಹಾಗೂ ನಿವೃತ್ತಿ ಹೊಂದಿರುವ ಮತ್ತು ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧ್ಯಾಪಕರ ಹಕ್ಕು ಮತ್ತು ಹಿತಾಸಕ್ತಿಗಳ ರಕ್ಷಣೆ ಸಂಘದ ಪ್ರಮುಖ ಧ್ಯೇಯೋದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಂಘ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ವಿಶ್ವವಿದ್ಯಾಲಯದ ಏಳು-ಬೀಳುಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಅದರ ಅಸ್ತಿತ್ವ ಮತ್ತು ಬೆಳವಣಿಗೆ ಉಳಿಸುವ ನಿಟ್ಟಿನಲ್ಲಿ ಶ್ರಮಿಸಿದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಸ್ವಾಯತ್ತತೆ, ಭವಿಷ್ಯ ಹಾಗೂ ಕಾರ್ಯಚಟುವಟಿಕೆ ಉಳಿಸಿ ಬೆಳೆಸುವ ಜವಾಬ್ದಾರಿ ಸಂಘ ನಿರ್ವಹಿಸುತ್ತಿದೆ. ಇದರೊಂದಿಗೆ ಅಧ್ಯಾಪಕೇತರ ಸಹೋದ್ಯೋಗಿಗಳ ಹಿತಾಸಕ್ತಿಗಳಿಗೂ ಸಹಕಾರ ನೀಡುತ್ತಾ, ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವಲ್ಲಿಯೂ ಅಧ್ಯಾಪಕರ ಸಂಘ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.

ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ವಾಸುದೇವ ಬಡಿಗೇರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಚಂದ್ರಶೇಖರ ಕಂಬಾರ ಕನ್ನಡ ವಿಶ್ವವಿದ್ಯಾಲಯವನ್ನು ಮಹತ್ವದ ಆಶಯಗಳೊಂದಿಗೆ ಸ್ಥಾಪಿಸಿದ್ದಾರೆ. ವಿಶ್ವವಿದ್ಯಾಲಯದ ಭೂಮಿ ಉಳಿಸಿಕೊಳ್ಳುವಲ್ಲಿ ಅಧ್ಯಾಪಕರ ಪಾತ್ರ ಮಹತ್ವದ್ದಾಗಿದೆ. ವಿಶ್ವವಿದ್ಯಾಲಯದ ಏಳಿಗೆಗೆ ಮತ್ತು ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.

ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ ಮುಖ್ಯ ಅತಿಥಿಗಳಾಗಿ ಸಭೆಯಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಡಾ. ಎರ್ರಿಸ್ವಾಮಿ ಈ. ವಾರ್ಷಿಕ ವರದಿ ಮಂಡಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಗಂಗಾಧರ ದೈವಜ್ಞ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಡಾ.ಎಫ್.ಟಿ. ಹಳ್ಳಿಕೇರಿ, ಡಾ.ಮಾಧವ ಪೆರಾಜೆ, ಡಾ. ರಮೇಶ ನಾಯಕ, ಡಾ. ಎಸ್.ವೈ. ಸೋಮಶೇಖರ್ ಹಾಗೂ ಡಾ. ಮೋಹನರಾವ್ ಪಂಚಾಳ ಅವರನ್ನು ಸನ್ಮಾನಿಸಲಾಯಿತು.

ಅಧ್ಯಾಪಕರ ಸಂಘದ ಸದಸ್ಯ ಡಾ.ರಮೇಶ ನಾಯಕ ಸ್ವಾಗತಿಸಿ ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ