11ಕ್ಕೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

KannadaprabhaNewsNetwork |  
Published : Nov 03, 2023, 12:31 AM IST
ಯಾದಗಿರಿ ನಗರದ ಜಿಲ್ಲಾಽಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ವೀರವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ಸಭೆ

ಕನ್ನಡಪ್ರಭ ವಾರ್ತೆ ಯಾದಗಿರಿಜಿಲ್ಲಾಡಳಿತ ವತಿಯಿಂದ ನ.11 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ನಡೆದ ವೀರವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ನಗರದಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಮಟ್ಟದ ವೀರವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆ, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿ ಸೌಕರ್ಯ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.ಜಯಂತಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲೂಕು ಮಟ್ಟದಲ್ಲಿ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ, ಡಿಡಿಪಿಯು ಸಿ.ಕೆ. ಕುಳಗೇರಿ, ಮುಖಂಡರಾದ ಮಲ್ಲಿಕಾರ್ಜುನ ಈಟೆ, ವೀರಭದ್ರಪ್ಪ ಯಡ್ಡಳ್ಳಿ, ಗಾಳೆಪ್ಪ ಪೂಜಾರಿ, ಸಾಮಾಜಿಕ ಕಾರ್ಯಕರ್ತ ಶೇಖ್ ಇಮ್ರಾನ್, ಮುಖಂಡರಾದ ಮಂಜುನಾಥ ಗುರುಸಿಣಿಗಿ, ಬಸ್ಸು ನಾಟೇಕಾರ, ಪರಶುರಾಮ ಚಲುವಾದಿ, ಬಸವರಾಜ ನೀಲಹಳ್ಳಿ ವಡಿಗೇರಾ, ಆರೋಗ್ಯ ಇಲಾಖೆ ತುಳಸಿರಾಮ್ ಸೇರಿ ಇತರರಿದ್ದರು.-2ವೈಡಿಆರ್8:

ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ
ಮತದಾರರ ಕರಡುಪಟ್ಟಿ ಪ್ರಕಟ ಗ್ರೇಟರ್‌ ಬೆಂಗಳೂರಲ್ಲಿ 89 ಲಕ್ಷ ಮತದಾರರು