ಕನ್ನಡಪ್ರಭ ವಾರ್ತೆ ಮೈಸೂರು
ನಿಸರ್ಗದ ಕೊಡುಗೆಯಾದ ಗೆಡ್ಡೆ ಗೆಣಸುಗಳ ಅದ್ಭುತ ಲೋಕವನ್ನು ಮೈಸೂರಿನ ಗ್ರಾಹಕರಿಗೆ ಪರಿಚಯಿಸಲು ಈ ಮೇಳ ಆಯೋಜಿಸಲಾಗಿದೆ. ಎರಡು ದಿನಗಳ ಈ ಮೇಳದಲ್ಲಿ ವಿವಿಧ ಬಗೆಯ ಕಾಡು ಮತ್ತು ನಾಡಿನ ಗೆಢ್ಡೆ ಗೆಣಸುಗಳು, ಮೌಲ್ಯವರ್ಧಿತ ಪಧಾರ್ಥ, ಗೆಣಸಿನ ಅಡುಗೆಗಳು ಪ್ರದರ್ಶನ ಮತ್ತು ಮಾರಾಟಕ್ಕೆ ಬರಲಿವೆ.
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೇಳ ಉದ್ಘಾಟಿಸಲಿದ್ದು, ರೋಟರಿ ಕ್ಲಬ್ ಮೈಸೂರು ಪಶ್ಚಿಮದ ಅಧ್ಯಕ್ಷ ರೊಟೇರಿಯನ್ ಎಸ್.ಕೆ. ಸುಧೀಂದ್ರ ಅಧ್ಯಕ್ಷತೆ ವಹಿಸುವರು. 300ಕ್ಕೂ ಹೆಚ್ಚಿನ ಗೆಡ್ಡೆ ಗೆಣಸು ತಳಿಗಳ ಸಂರಕ್ಷಿಸಿರುವ ಕೇರಳದ ಎನ್.ಎಮ್. ಶಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಇದೇ ವೇಳೆ ನಿರ್ಲಕ್ಷಿತ ಬೆಳೆಗಳ ಕ್ಯಾಲೆಂಡರ್ ಬಿಡುಗಡೆಯಾಗಲಿದೆ.ಕರ್ನಾಟಕದ ವಿವಿಧ ಭಾಗಗಳಿಂದ ಬರುವ 25ಕ್ಕೂ ಹೆಚ್ಚಿನ ಮಳಿಗೆಗಳು ಗೆಡ್ಡೆ ಗೆಣಸಿನ ಮೌಲ್ಯವರ್ಧಿತ ಪದಾರ್ಥ ಮತ್ತು ಬಗೆ ಬಗೆಯ ಅಡುಗೆಗಳನ್ನು ಉಣಬಡಿಸುವರು. ಪರ್ಪಲ್ ಯಾಮ್, ಮಾವಿನ ಶುಂಠಿ, ಕೂವೆ ಗೆಡ್ಡೆ, ಹುತ್ತರಿ ಗೆಡ್ಡೆ, ಹಳದಿ ಮತ್ತು ಕೆಂಪು ಸಿಹಿ ಗೆಣಸು, ಬಳ್ಳಿ ಬಟಾಟೆ, ಕಪ್ಪು, ಹಸಿರು ಮತ್ತು ಹಳದಿ ಅರಿಷಿಣ, ಸುವರ್ಣ ಗೆಡ್ಡೆ ಮತ್ತು ಬಗೆ ಬಗೆಯ ಕೆಸುವಿನ ಬೀಜದ ಗೆಡ್ಡೆಗಳು ಬಿತ್ತನೆಗೆ ಸಿಗಲಿವೆ.
ಗೆಡ್ಡೆ ಗೆಣಸು ಅಡುಗೆ ಸ್ಪರ್ಧೆ
ಕಾಡಿನ ಅಥವಾ ಕೃಷಿ ಮೂಲದ ಗೆಡ್ಡೆ ಗೆಣಸುಗಳನ್ನು ಬಳಸಿ ತಯಾರಿಸುವ ಅಡುಗೆಗಳು ಸಾಂಪ್ರದಾಯಿಕವಾಗಿರಬಹುದು ಅಥವಾ ಹೊಸ ರುಚಿಯಾಗಿರಬಹುದು. ವಿವಿಧ ಜಾತಿಯ ಗೆಡ್ಡೆ ಗೆಣಸುಗಳನ್ನು ಬಳಸಿ ಮಾಡಿದ ಅಡುಗೆಯನ್ನು, ಮನೆಯಲ್ಲೇ ತಯಾರಿಸಿ, ಗೆಡ್ಡೆ ಗೆಣಸು ಮೇಳಕ್ಕೆ ಫೆ. 11ರಂದು ಬೆಳಗ್ಗೆ 12ಕ್ಕೆ ತರಬೇಕು.
ಹೆಚ್ಚಿನ ವಿವರಗಳಿಗೆ ಮೊ. 70900 09944, 91645 23840 ಸಂಪರ್ಕಿಸಬಹುದು.