ಸೋಮವಾರಪೇಟೆ: ಬಿಜೆಪಿ ಹಿರಿಯರ ವೇದಿಕೆಯ ನೇತೃತ್ವದಲ್ಲಿ ಇಲ್ಲಿನ ಅಟಲ್‌ಜೀ ಕನ್ನಡ ಭವನದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗಿಯಾದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ದೇಶದ ರಾಜಕೀಯ ರಂಗದಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದ ಅಟಲ್ ಬಿಹಾರಿ ವಾಜಪೇಯಿ ಅವರು ರಾಜಕೀಯದಿಂದ ಆಚೆಗೂ ಸಹ ಅಪ್ಪಟ ರಾಷ್ಟ್ರ ಪ್ರೇಮಿಯಾಗಿ, ದೇಶದ ಭವಿಷ್ಯ, ಭದ್ರತೆ, ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ತಮ್ಮ ಇಡೀ ಜೀವಮಾನವನ್ನು ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟವರು ಎಂದು ಸ್ಮರಿಸಿದರು.
ಬಿಜೆಪಿ ಹಿರಿಯರ ವೇದಿಕೆ ಸಂಚಾಲಕ ಬಿ.ಟಿ. ತಿಮ್ಮಶೆಟ್ಟಿ ಮಾತನಾಡಿ, ವಾಜಪೇಯಿ ಅವರ ಉದಾತ್ತ ಚಿಂತನೆಯ ಸ್ಮರಣೆಯನ್ನು ಮಾಡುವ ಉದ್ದೇಶದಿಂದ ಹಿರಿಯರ ವೇದಿಕೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದ ಎಂದರು.
ಪಕ್ಷದ ಹಿರಿಯ ಕಾರ್ಯಕರ್ತ ಪ್ರೇಮ್‌ನಾಥ್ ಕಾರ್ಯಕ್ರಮ ನಿರ್ವಹಿಸಿದರು. ಬಿಜೆಪಿ ಹಿರಿಯರ ವೇದಿಕೆ ಪದಾಧಿಕಾರಿಗಳಾದ ಬಿ.ಆರ್. ಮೃತ್ಯುಂಜಯ, ಬಿ.ಪಿ. ಶಿವಕುಮಾರ್, ದಯಾನಂದ್, ಹಾಲೇರಿ ದಿನೇಶ್, ಕೆ.ಎನ್. ಶಿವಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು. ಬಿಜೆಪಿ ಪ್ರಮುಖರಾದ ಬಿ.ಬಿ. ಭಾರತೀಶ್, ಗೌತಮ್ ಗೌಡ, ಮಹೇಶ್ ತಿಮ್ಮಯ್ಯ, ದರ್ಶನ್ ಜೋಯಪ್ಪ, ಬಿ.ಡಿ. ಮಂಜುನಾಥ್, ಎಸ್.ಪಿ. ಪೊನ್ನಪ್ಪ, ಎಂ.ಬಿ. ಅಭಿಮನ್ಯುಕುಮಾರ್, ಸುಮಾ ಸುದೀಪ್, ಮಂಜುಳಾ ಸುಬ್ರಮಣಿ, ಶರತ್‌ಚಂದ್ರ, ಶ್ರೀನಿಧಿ ಲಿಂಗಪ್ಪ, ಗೋವಿಂದ ಸೇರಿದಂತೆ ವಾಜಪೇಯಿ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ವಿದ್ಯಾ ಗಣಪತಿ ದೇವಾಲಯದಲ್ಲಿ ದಿನದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು, ಬಿಸ್ಕತ್‌ಗಳನ್ನು ವಿತರಿಸಲಾಯಿತು.