ಅಟಲ್‌ ಬಿಹಾರಿ ವಾಜಪೇಯಿ ಶ್ರೇಷ್ಠ ಮುತ್ಸದ್ದಿ

KannadaprabhaNewsNetwork |  
Published : Mar 28, 2025, 12:33 AM IST
ಅಟಲ್ ವಿರಸತ್ ಕಾರ್ಯಕ್ರಮದಲ್ಲಿಒಡನಾಟ ಉಳ್ಳ ಹಿರಿಯರಿಗೆ ಬಿಜೆಪಿಯಿಂದ ಸನ್ಮಾನಿಸಿ ಗೌರವ | Kannada Prabha

ಸಾರಾಂಶ

ಅಟಲ್ ವಿರಾಸತ್ ಹೆಸರಿನಲ್ಲಿ ಅಟಾಲ್ ಅವರ ಪ್ರತಿ ಜಿಲ್ಲೆಯಲ್ಲಿ ಬಿಜೆಪಿಯಲ್ಲಿದ್ದು, ಅವರ ಜೊತೆ ಕೆಲಸ ಮಾಡಿದ್ದರೂ ಹಾಗೂ ಹತ್ತಿರದಿಂದ ನೋಡಿದ್ದಾರೆ ಅವರನ್ನು ಸನ್ಮಾನಿಸಿ ಗೌರವಿಸುತ್ತಿದ್ದೇವೆ. ಅಟಲ್ ಜೀವನ ನೆನಪು ಮಾಡುವ, ಅವರ, ಜೀವನ, ವ್ಯಕ್ತಿತ್ವ ನಮ್ಮ ಮೇಲೆ ಜೀವಂತವಾಗಿ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಟಲ್ ಜೀವನದಲ್ಲಿ ಲಕ್ಷಾಂತರ ಘಟನೆ ನಡೆದಿದೆ. ಅವರಿಂದ ಪ್ರೇರಣೆಯನ್ನು ಕಾರ್ಯಕರ್ತರು ಪಡೆದಿದ್ದಾರೆ ಎಂದು ವಾಜಪೇಯಿ ಜನ್ಮ ಶತಾಬ್ಧಿ ಸಹ ಸಂಚಾಲಕ ಪಣೀಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಆರ್.ಸಿ.ರಸ್ತೆ, ಗಂಧದಕೋಠಿ ಆವರಣದಲ್ಲಿರುವ ಖಾಸಗಿ ಹೋಟೆಲೊಂದರಲ್ಲಿ ಗುರುವಾರ ನಡೆದ ಅಟಲ್ ವಿರಾಸತ್ ಕಾರ್ಯಕ್ರಮ- ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿರವರ ಜನ್ಮ ಶತಾಬ್ಧಿ ವರ್ಷದ ಅಂಗವಾಗಿ ಹಿರಿಯರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.

ಇದೇ ವೇಳೆ ಅಟಾಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ ಸಹ ಸಂಚಾಲಕ ಪಣೀಶ್ ಮಾತನಾಡಿ, ಅಟಲ್ ಜೀ ಅವರು ಎಲ್ಲೆಲ್ಲಿ ಬಂದಿದ್ದರೂ, ಅವರ ಓಡಾಟ, ಹೋರಾಟಗಳು, ಸಂಘಟನೆಗಳು, ಅವರ ವ್ಯಕ್ತಿತ್ವ, ಒಡನಾಟ, ಅವರ ಸಂಪರ್ಕಕ್ಕೆ ಬಂದಂತಹ ವ್ಯಕ್ತಿಗಳು, ಅವರ ನೆನಪಿನ ಸ್ಫೂರ್ತಿಯನ್ನು ಸಂಗ್ರಹ ಮಾಡುವಂತಹ ಫೋಟೋ ಸಂಗ್ರಹಿಸುವ ಜೊತೆಗೆ ಯಾರು ಅಟಾಲ್ ಬಿಹಾರಿ ಜೊತೆ ಒಡನಾಟವಿತ್ತು ಅವರನ್ನು ಗುರುತಿಸಿ ಗೌರವಿಸುವ ಕೆಲಸ ನಾವು ಕಳೆದ ಒಂದು ತಿಂಗಳಿನಿಂದ ಮಾಡಿಕೊಂಡು ಈ ಹಿಂದೆಯೇ ಬಂದಿದ್ದೇವೆ ಎಂದರು. ಈಗ ಅಟಲ್ ವಿರಾಸತ್ ಹೆಸರಿನಲ್ಲಿ ಅಟಾಲ್ ಅವರ ಪ್ರತಿ ಜಿಲ್ಲೆಯಲ್ಲಿ ಬಿಜೆಪಿಯಲ್ಲಿದ್ದು, ಅವರ ಜೊತೆ ಕೆಲಸ ಮಾಡಿದ್ದರೂ ಹಾಗೂ ಹತ್ತಿರದಿಂದ ನೋಡಿದ್ದಾರೆ ಅವರನ್ನು ಸನ್ಮಾನಿಸಿ ಗೌರವಿಸುತ್ತಿದ್ದೇವೆ. ಅಟಲ್ ಜೀವನ ನೆನಪು ಮಾಡುವ, ಅವರ, ಜೀವನ, ವ್ಯಕ್ತಿತ್ವ ನಮ್ಮ ಮೇಲೆ ಜೀವಂತವಾಗಿ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಟಲ್ ಜೀವನದಲ್ಲಿ ಲಕ್ಷಾಂತರ ಘಟನೆ ನಡೆದಿದೆ. ಅವರಿಂದ ಪ್ರೇರಣೆಯನ್ನು ಕಾರ್ಯಕರ್ತರು ಪಡೆದಿದ್ದಾರೆ. ನಾವು ಯಾವ ದಿಕ್ಕಿನಲ್ಲಿ ರಾಜಕಾರಣ ಮಾಡಬೇಕು ಎನ್ನುವ ದಿಕ್ಸೂಚಿ ನಮಗೆ ತೋರಿಸುತ್ತದೆ ಎಂದು ಕಿವಿಮಾತು ಹೇಳಿದರು. ರಾಜಕಾರಣದಲ್ಲಿ ಕೆಲಸ ಮಾಡುವ ನಾವು ಯಾವುದು ಆದರ್ಶ ಎಂಬುದನ್ನು ತಿಳಿದಿರಬೇಕು. ಯಾವ ಮಾರ್ಗದರ್ಶನ ತಿಳಿದಿರಬೇಕು ಬಗ್ಗೆ ಜಾಗೃತಿ ಅಗತ್ಯ ಎಂದು ಸಲಹೆ ನೀಡಿದರು.

ದಿಟ್ಟ ನಿರ್ಧಾರ ಎಂದರೇ ವಾಜಪೇಯಿ ತೋರಿಸುತ್ತಾರೆ. ಜಗತ್ತಿನ ಅಂತರ ಶಕ್ತಿಯನ್ನು ದಿಟ್ಟ ಹೆಜ್ಜೆ ಇಟ್ಟು ತೋರಿಸುತ್ತಾರೆ. ವಾಜಪೇಯಿ ಶ್ರೇಷ್ಠ ಮುತ್ಸದ್ದಿ. ವಿಚಾರದಿಂದ ದೂರವಾಗದೆ ಎಲ್ಲರೊಂದಿಗೆ ಸ್ನೇಹದಿಂದ ಇದ್ದರು. ಆದರೆ ಯಾವ ಅಡ್ಜೆಸ್ಟ್‌ಮೆಂಟ್ ರಾಜಕೀಯ ಅವರು ಮಾಡಲಿಲ್ಲ. ತಮ್ಮ ವ್ಯಕ್ತಿತ್ವ ಮತ್ತೊಬ್ಬರಿಗೆ ಪ್ರೇರಣೆ ಆಗಬೇಕು ಎಂಬ ನಿಟ್ಟಿನಲ್ಲಿ ಮುನ್ನೆಡೆದಿದ್ದಾರೆ. ದೇಶದ ಅಜಾತ ಶತ್ರು ಇದ್ದರೇ ಅವರೆ ವಾಜಪೇಯಿ ಎಂದು ಇದೇ ವೇಳೆ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನಪಿಸಿಕೊಂಡರು.

ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮಾತನಾಡಿ, ವಾಜಪೇಯಿ ಕಾಲದಿಂದಲೂ ಹೋರಾಟ ಮಾಡಿದವರು ನಮ್ಮ ಸಕಲೇಶಪುರದಲ್ಲಿ ಮತ್ತು ಈ ಜಿಲ್ಲೆಯಲ್ಲಿ ಹಲವಾರು ಜನ ಇದ್ದಾರೆ. ಬಿಜೆಪಿಯಲ್ಲಿ ಹಾಸನಕ್ಕೆ ಉತ್ತಮವಾದ ಸ್ಥಾನಮಾನವಿದೆ. ಹಿಂದಿನ ದಿನಗಳಲ್ಲಿ ಎಮರ್ಜನ್ಸಿ ಕಾಲದಲ್ಲಿ ಜೈಲಿಗೆ ಹೋಗಿದಾಗಿನಿಂದ ಹಿಡಿದು ವಾಜಪೇಯಿ ಜೊತೆ ಪಾರ್ಟಿ ಕಟ್ಟಿರುವ ಹಲವಾರು ಜನರು ನಮ್ಮ ಜಿಲ್ಲೆಯಲ್ಲಿರುವುದು ನಮ್ಮ ಹೆಮ್ಮೆ ಎಂದರು.

ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಹುಡಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಬಿಜೆಪಿ ಸಂಘಟನಾ ಪರ್ವ ಜಿಲ್ಲಾ ಸಂಚಾಲಕ ರಾಜಕುಮಾರ್ ಇತರರು ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ