ಕನ್ನಡಪ್ರಭ ವಾರ್ತೆ ಮಂಡ್ಯದೇಶದ ಅಭಿವೃದ್ಧಿಗೆ ವಾಜಪೇಯಿ ಕೊಡುಗೆ ಅಪಾರ. ಅವರ ದಿಟ್ಟ ನಿರ್ಧಾರಗಳಿಂದ ದೇಶದಲ್ಲಿ ದುಷ್ಕೃತ್ಯಗಳು ಕಡಿಮೆಯಾಗಿದ್ದವು ಎಂದು ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ತಿಳಿಸಿದರು.
೧೯೯೮-೨೦೦೪ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ ಅವರು ಬಿಜೆಪಿಯಿಂದ ದೇಶದ ಪ್ರಧಾನಿಯಾದ ಮೊದಲ ನಾಯಕರಾಗಿದ್ದರು. ದೇಶಕ್ಕೆ ೩ ಭಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅವರ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳು, ಕಾರ್ಯಕ್ರಮಗಳು ಅನುಷ್ಠಾನಗೊಂಡವು. ಭಾರತವು ೧೯೯೮ರಲ್ಲಿ ರಾಜಸ್ಥಾನದ ಪೋಖ್ರಾನ್‌ನಲ್ಲಿ ಸರಣಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತು ಎಂದರು.
ಬಿಜೆಪಿ ಕಚೇರಿಯಲ್ಲಿ ಅಟಲ್ ಜನ್ಮದಿನ ಆಚರಣೆ:ನಗರದಲ್ಲದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ವಾಜಪೇಯಿ ಜನ್ಮದಿನ ಆಚರಣೆ ಮತ್ತು ಉತ್ತಮ ಆಡಳಿತ ದಿವಸ್ ಕಾರ್ಯಕ್ರಮಕ್ಕೆ ನಗರ ಬಿಜೆಪಿ ಮೋರ್ಚಾ ಅಧ್ಯಕ್ಷ ವಿವೇಕ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ರೈತ ಮೋರ್ಚಾ ಮಾಜಿ ಅಧ್ಯಕ್ಷ ಸಾಯಿರವಿಂದ್ರ ಕಲ್ಲಹಳ್ಳಿ, ತಾಲೂಕು ಉಪಾಧ್ಯಕ್ಷ ಶಿವಕುಮಾರ್‌ಆರಾಧ್ಯ, ಜಿಲ್ಲಾ ಕಾರ್ಯದರ್ಶಿ ಹರ್ಷ, ನಗರಸಭಾ ಮಾಜಿ ಸದಸ್ಯರಾದ ಶಿವಕುಮಾರ್‌ಕೆಂಪಯ್ಯ, ಪ್ರಸನ್ನ, ಚಂದ್ರ, ಮಾಧ್ಯಮ ವಕ್ತಾರ ಸಿ.ಟಿ.ಮಂಜುನಾಥ್, ಗಣೇಶ್, ಶ್ರೀನಿವಾಸ್ ಮತ್ತಿತರರಿದ್ದರು.