ಕ್ರೀಡೆ ಸಾಧಕನ ಸ್ವತ್ತೇ ಹೊರತು ಇಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ. ಪ್ರತಿಭೆ ಹೊಂದಿರುವವರು ಇಲ್ಲಿ ಸಾಧನೆ ಮಾಡಬಹುದು. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಂಚಗಾರಕೊಪ್ಪಲು ಗ್ರಾಮದ ಶಿಲ್ಪಾ ಎಂಬ ಯುವತಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿ ದೇಶಕ್ಕೆ ಕಂಚಿನ ಪದಕ ತಂದುಕೊಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಹೊರತೆಗೆಯುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಪಾಂಡವಪುರ
ಕ್ರೀಡೆಯಲ್ಲಿ ತಾರತಮ್ಯವಿಲ್ಲ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಸೋಲು- ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಹೇಳಿದರು.
ತಾಲೂಕಿನ ಜಯಂತಿ ನಗರದ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಪಂ ಮಂಡ್ಯ, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಡ್ಯ ಹಾಗೂ ಶ್ರೀಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಸಾಧಕನ ಸ್ವತ್ತೇ ಹೊರತು ಇಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ. ಪ್ರತಿಭೆ ಹೊಂದಿರುವವರು ಇಲ್ಲಿ ಸಾಧನೆ ಮಾಡಬಹುದು. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಂಚಗಾರಕೊಪ್ಪಲು ಗ್ರಾಮದ ಶಿಲ್ಪಾ ಎಂಬ ಯುವತಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿ ದೇಶಕ್ಕೆ ಕಂಚಿನ ಪದಕ ತಂದುಕೊಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಹೊರತೆಗೆಯುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕ್ರೀಡೆಯಲ್ಲಿ ಸಾಧನೆ ಮಾಡಿ ರಾಜ್ಯ, ರಾಷ್ಟ್ರಮಟ್ಟಕ್ಕೆ ಹೋಗುವ ಪ್ರತಿಭೆಗಳಿಗೆ ಕೈಲಾಸದ ಸಹಕಾರ ಮಾಡಿಕೊಡುವ ಕೆಲಸ ಮಾಡುತ್ತೇನೆ. ಇದರಲ್ಲಿ ಸೋಲು, ಗೆಲುವು ಸಾಮಾನ್ಯ. ಎರಡನ್ನೂ ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯೂ ಕಳೆದ ಎರಡು ವರ್ಷಗಳಿಂದಲೂ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಆಯೋಜನೆ ಮಾಡಿ ಕ್ರೀಡಾಪಟುಗಳಿಗೆ ಬೇಕಿರುವ ಸೌಲಭ್ಯ ಒದಗಿಸಿಕೊಡುವ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಇದ್ದರೂ ಸಹ ಈ ಶಿಕ್ಷಣ ಸಂಸ್ಥೆ ತಾವೇ ನಡೆಸುವ ಜವಾಬ್ದಾರಿ ಹೊರುವ ಮೂಲಕ ಉದಾರತೆ ತೋರಿಸುತ್ತಿದ್ದಾರೆ ಎಂದು ಬಣ್ಣಿಸಿದರು.
ಪದವಿ ಪೂರ್ವ ಉಪನಿರ್ದೇಶಕ ಪ್ರಸನ್ನಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕ್ರೀಡಾಕೂಟಗಳಲ್ಲೂ ಭಾಗವಹಿಸುವ ಮೂಲಕ ಮಾನಸಿಕ ಹಾಗೂ ಭೌತಿಕವಾಗಿ ಬೆಳವಣಿಗೆ ಹೊಂದಬೇಕು ಎಂದು ತಿಳಿಸಿದರು.
ಇದೇ ವೇಳೆ ಎಂಎಲ್ ಸಿ ವಿವೇಕಾನಂದ ಅವರು ಕ್ರೀಡಾಪಟುಗಳನ್ನು ಪರಿಚಯ ಮಾಡಿಕೊಂಡು ಕ್ರೀಡಾಜ್ಯೋತಿ ಸ್ವೀಕರಿಸಿದರು. ಕ್ರೀಡಾಕೂಟದಲ್ಲಿ ಸಂಸ್ಥೆ ಅಧ್ಯಕ್ಷ ಪಿ.ಹೊನ್ನರಾಜು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಮ್ಯಾನೇಜಿಂಗ್ ಟ್ರಸ್ಟಿ ಪ್ರೊ.ಎಂ.ಪಂಚಲಿಂಗೇಗೌಡ, ಕಾರ್ಯದರ್ಶಿ ಪಿ.ಅಕ್ಷಯ್, ನೋಡಲ್ ಅಧಿಕಾರಿ ಎಚ್.ಎನ್.ರಾಮಕೃಷ್ಣೇಗೌಡ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಆರ್.ಎಂ.ಚನ್ನಕೃಷ್ಣಯ್ಯ, ಪ್ರಧಾನ ಕಾರ್ಯದರ್ಶಿ ಹನುಮಂತಯ್ಯ, ಜಿಲ್ಲಾ ಸಂಯೋಜಕ ಎಸ್.ಎಂ.ಗುರುಸ್ವಾಮಿ, ಮರೀಗೌಡ, ದೈಹಿಕ ಪರಿವೀಕ್ಷಕ ಶ್ರೀನಿವಾಸ್, ಎಂ.ಮಹೇಶ್, ಸಂಸ್ಥೆ ತಾಂತ್ರಿಕ ನಿರ್ದೇಶಕ ಧನರಾಜ್ ಪಿ., ಪ್ರಾಂಶುಪಾಲರಾದ ಸೌಮ್ಯ ಆರ್.ವಿ., ಕೆ.ಕುಬೇರ್, ಬಾಲಚಂದ್ರ ಸೇರಿದಂತೆ ಹಲವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.