ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ಶಾಖೆಯ ಉದ್ಘಾಟನೆ ಬೋಳಾರ ಜೆಪ್ಪು ಮಾರುಕಟ್ಟೆ ಬಳಿಯ ಯುನಿಕ್ ಸ್ಟ್ರೀಕ್ ಕಾಂಪ್ಲೆಕ್ಸ್‌ನಲ್ಲಿ ಮಾ.25 ರಂದು ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 34ನೇ ಶಾಖೆಯ ಉದ್ಘಾಟನೆ ಬೋಳಾರ ಜೆಪ್ಪು ಮಾರುಕಟ್ಟೆ ಬಳಿಯ ಯುನಿಕ್ ಸ್ಟ್ರೀಕ್ ಕಾಂಪ್ಲೆಕ್ಸ್‌ನಲ್ಲಿ ಮಾ.25 ರಂದು ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ವಹಿಸಲಿದ್ದಾರೆ. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ನೂತನ ಶಾಖೆಯ ಉದ್ಘಾಟನೆ ನೆರೆವೇರಿಸಲಿದ್ದಾರೆ. ಸಮಾಜ ಸೇವಕಿ ತಾರಾ ಹೇಮಚಂದ್ರ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಅಂಬಾ ಮಹೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷ ಸೀತಾರಾಮ್ ಎ. ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಸಿ. ಪ್ರಸಾದ್ ರೆಡ್ದಿ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮಂಗಳೂರು ಕೋ-ಆಪರೇಟಿವ್ ಬಿಲ್ಡಿಂಗ್ ಸೊಸೈಟಿ ಅಧ್ಯಕ್ಷ ರಂಜನ್ ಮಿಜಾರ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಂಗಳಾದೇವಿ ಸೇವಾ ಸಮಿತಿ ಗೌರವಾಧ್ಯಕ್ಷ ಅಶೋಕ್ ಕುಮಾರ್ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ದ.ಕ ಜಿಲ್ಲಾ ಅಮೆಚೂರು ಕುಸ್ತಿ ಫೆಡರೇಷನ್ ಅಧ್ಯಕ್ಷ ದಿಲ್‌ರಾಜ್ ಆಳ್ವ ಅವರು ಭವಿಷ್ಯ ಸುರಕ್ಷಾ ಯೋಜನೆಗೆ ಚಾಲನೆ ನೀಡುತ್ತಾರೆ. ಬಿಲ್ಲವ ಸಂಘ ಮಂಗಳಾದೇವಿ ಅಧ್ಯಕ್ಷ ರಾಜರತ್ನ ಸನಿಲ್ ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ದ.ಕ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್. ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯೆ ಭಾನುಮತಿ ಪಿಗ್ಮಿ ಖಾತೆಗೆ ಚಾಲನೆ ನೀಡುತ್ತಾರೆ. ಬೋಳಾರದ ಉದ್ಯಮಿ ರಮಾನಂದ ಪೂಜಾರಿ ಹಾಗೂ ಕಟ್ಟಡದ ಮಾಲೀಕ ಜೆನೆಟ್ ಮೆಲ್ವಿನ್ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ನೂತನ ಶಾಖೆ ಉದ್ಘಾಟನೆ ಪ್ರಯಕ್ತ 100 ದಿನಗಳ ಠೇವಣಿಗೆ ವಿಶೇಷ ಬಡ್ಡಿ ದರ ಶೇ. 8.50, 500 ದಿನಗಳ ಠೇವಣಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1 ಸಾವಿರ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ 12 ಸಾವಿರ ರು.ವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ನೀಡಲಾಗುವುದು ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.