ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತವೃಂದದ ವತಿಯಿಂದ ಲೋಕಕಲ್ಯಾಣಾರ್ಥ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಪ್ರಾರ್ಥಿಸಿ ಮಂಗಳವಾರ ವಿನೋಬ ನಗರದ ಶಿವಾಲಯ ದೇವಸ್ಥಾನದ ಆವರಣದಲ್ಲಿ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗ ನೆರವೇರಿತು.ಬೆಳಗ್ಗೆ 8 ಗಂಟೆಗೆ ಗಂಗಾಪೂಜೆ ನೆರವೇರಿಸಿ, ಬಳಿಕ ಗಣಪತಿ, ನಾಂದಿ, ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ, ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ ಪೂಜಾದಿಗಳು ನೆರವೇರಿದವು. ಬಿಳಕಿ ಹಿರೇಮಠದ ಶ್ರೀ ಷ.ಬ್ರ. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಡಾ. ಅಭಿನವ ಸಿದ್ದಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ತಂಡವು 121 ಪುರೋಹಿತರು ಮಹಾರುದ್ರ ಮಂತ್ರ ಪಠಣದೊಂದಿಗೆ ಅತಿರುದ್ರ ಮಹಾಯಾಗ ನಡೆಸಿಕೊಟ್ಟರು.
ಅತಿರುದ್ರ ಯಾಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಸ್ವಾಗತ ಸಮಿತಿ ಗೌರವಾಧ್ಯಕ್ಷ ಎನ್.ಜೆ. ರಾಜಶೇಖರ್ , ಸಮಿತಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಉಪಾಧ್ಯಕ್ಷರಾದ ಎಚ್.ವಿ. ಮಹೇಶ್ವರಪ್ಪ, ಎಸ್.ದತ್ತಾತ್ರಿ, ಜ್ಞಾನೇಶ್ವರ್, ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಮಲ್ಲಿಕಾರ್ಜುನ ಸ್ವಾಮಿ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಸರ್ಜಿ, ಸಹ ಸಂಚಾಲಕರಾದ ಮಹಾಲಿಂಗಯ್ಯ ಶಾಸ್ತ್ರಿ, ನಾಗಯ್ಯ ಶಾಸ್ತ್ರಿ, ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್, ಅನಿತಾ ರವಿಶಂಕರ್, ಮೋಹನ್ ರೆಡ್ಡಿ ಮತ್ತಿತರರು ಯಾಗದಲ್ಲಿ ಭಾಗವಹಿಸಿದ್ದರು.- - - -5ಎಸ್‌ಎಂಜಿಕೆಪಿ05:
ಶಿವಮೊಗ್ಗದ ವಿನೋಬನಗರದ ಶಿವಾಲಯ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗ ನೆರವೇರಿತು.