ಮಂಗಳೂರು: ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ ಮಂಗಳೂರು ವತಿಯಿಂದ ನಗರದ ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಸಹಭಾಗಿತ್ವದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಕಾಲೇಜಿನ ಸಭಾಂಗಣದಲ್ಲಿ ಕಣಚೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ವೈದ್ಯಕೀಯ ತಂಡದ ಸಹಕಾರದೊಂದಿಗೆ ನಡೆಯಿತು.
ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಹೇಮಾ ರಾವ್ ಮಾತನಾಡಿ, ಲಯನ್ಸ್‌ನಿಂದ ಈಗಾಗಲೇ ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಹಲವು ಶಿಬಿರಗಳನ್ನು ಆಯೋಜನೆ ಮಾಡಿದ್ದೇವೆ ಎಂದರು. ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.
ಸಂಘದ ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ರಮಾನಾಥ್ ಸನಿಲ್, ದಿವಾಕರ ಬಿಪಿ, ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಲಯನ್ ಕ್ಲಬ್ ಜಿಲ್ಲೆ 317ಡಿ ನಿಕಟ ಪೂರ್ವ ವಲಯಾಧ್ಯಕ್ಷ ಶೀನಾ ಪೂಜಾರಿ, ಕಣಚೂರು ಮೆಡಿಕಲ್ ಕಾಲೇಜಿನ ವೈದ್ಯ ಡಾ.ಸಿಮ್ರಾನ್, ಗೋಕರ್ಣನಾಥೇಶ್ವರ ಕಾಲೇಜಿನ ಎನ್‌ಎಸ್‌ಎಸ್, ಯೂತ್ ರೆಡ್ ಕ್ರಾಸ್ ಸಂಯೋಜನಾಧಿಕಾರಿ ಪ್ರತೀಕ್ಷಾ ಮತ್ತಿತರರು ಇದ್ದರು.ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಬಾಲಚಂದ್ರ ಸ್ವಾಗತಿಸಿದರು. ಅನುಷಾ ವಂದಿಸಿದರು. ಮಿಥುನ್‌ಚಂದ್ರ ನಿರೂಪಿಸಿದರು.