ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

KannadaprabhaNewsNetwork |  
Published : Aug 01, 2025, 12:30 AM IST
ಉಚಿತ ವೈದ್ಯಕೀಯ ತಪಾಸಣಾ ಶಿಬಿರ  | Kannada Prabha

ಸಾರಾಂಶ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ನೆರವೇರಿತು.

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಯುವಕ ಮಂಡಲ, ಯುವತಿ ಮಂಡಲ, ವನಿತಾ ಸೇವಾ ಸಮಾಜ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೃಷ್ಣಾಪುರ-ಕಾಟಿಪಳ್ಳ ಇವರುಗಳ ಆಶ್ರಯದಲ್ಲಿ ಯುವಕ ಮಂಡಲದ ೫ನೇ ವಿಭಾಗ ಕೃಷ್ಣಾಪುರದಲ್ಲಿ ನಡೆಯಿತು.

ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯೆ ಲಕ್ಷ್ಮೀ ಶೇಖರ್ ದೇವಾಡಿಗ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡಿಕೊಂಡು ಬರುತ್ತಿದೆ. ವಿಶೇಷವಾಗಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಅವಕಾಶವನ್ನು ನೀಡಿರುವುದು ಶ್ಲಾಘನೀಯ ಎಂದು ಹೇಳಿದರು.ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಶನ್ ಇದರ ಬ್ಯುಸಿನೆಸ್ ಡೆವಲಪ್‌ಮೆಂಟ್ ಆಪೀಸರ್ ಜೆ.ಸಿ. ನಾಯ್ಕ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಮಂಗಳಾ ಆಸ್ಪತ್ರೆಯು ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದೆ. ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು, ಬಿ.ಪಿ. ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಿದೆ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿದೆ. ಜನರು ಆರೋಗ್ಯವಂತರಾಗಿದ್ದರೆ ಮಾತ್ರ ಸ್ವಚ್ಚ ಸಮಾಜ ನಿರ್ಮಾಣ ಸಾಧ್ಯ. ಇದು ಸಂಘದ ೮೭ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ ಎಂದರು. ಕೃಷ್ಣಾಪುರ ಯುವಕ ಮಂಡಲದ ಗೌರವಾಧ್ಯಕ್ಷ ಪ್ರಶಾಂತ್ ಮುಡಾಯಿ ಕೋಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಮ್., ಮಂಗಳ ಕಾಲೇಜ್, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಶನ್ ನ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜೇಶ್ ಕುಮಾರ್, ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ಬೊಳ್ಳಾಜೆ, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ವನಿತಾ ಸೇವಾ ಸಮಾಜ ಇದರ ಅಧ್ಯಕ್ಷೆ ರೇಣುಕಾ ತಿಲಕ್‌ರಾಜ್, ಪ್ರಧಾನ ಕಾರ್ಯದರ್ಶಿ ಶ್ವೇತಾ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಅಶೋಕ್ ಕೃಷ್ಣಾಪುರ ಮತ್ತಿತರರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೨೫೦ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಓಷಧಿ ವಿತರಣೆ, ಉಚಿತ ಕನ್ನಡಕ ವಿತರಣೆ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.

ಸಂಘದ ಶಾಖಾಧಿಕಾರಿ ಸುಜಾತ ಸ್ವಾಗತಿಸಿದರು. ಶಾಖಾಧಿಕಾರಿ ಭಾಗ್ಯಶ್ರೀ ವಂದಿಸಿದರು. ಹಿರಿಯ ಶಾಖಾಧಿಕಾರಿ ಸ್ವಾತಿ ನಿರೂಪಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ