ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಶಾಖೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಸತೀಶ್‌ಚಂದ್ರ, ಜಗದೀಶ ಕೋಟ್ಯಾನ್ , ಮಾಧವ ಎಮ್. ಅಂಚನ್, ಲಕ್ಷ್ಮಣ್ ಸಾಲ್ಯಾನ್, ಚಂದ್ರಶೇಖರ್ ರೈ , ಸೀತಾಲಕ್ಷ್ಮಿ ಕುಳಾಯಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.ಸಂಘದ ಸದಸ್ಯರಾದ ಜಯ ಅಮೀನ್ , ಜಯರಾಮ ಉಪಧ್ಯಾಯ, ನರೇಂದ್ರ , ಲಕ್ಷ್ಮಣ್ ಟಿ ಪೂಜಾರಿ, ನ್ಯಾಯವಾದಿ ಪ್ರೇಮ ಅಮೀನ್, ಪ್ರಕಾಶ್ ಕೆ. ಎನ್ , ಪ್ರಶಾಂತ್ ಹೆಗ್ಡೆ ಮತ್ತಿತರರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಸುರತ್ಕಲ್ ಶಾಖೆಯು ೧೩ನೇ ವರ್ಷದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ. ಹಾಗೂ ಸಂಘದ ಎಲ್ಲ ಶಾಖೆಯಲ್ಲಿ ಇ-ಸ್ಟ್ಯಾಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಚಿನ್ನಾಭರಣ ಸಾಲ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೂನ್ಯ ಸೇವಾ ಶುಲ್ಕದಲ್ಲಿ ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಸತತವಾಗಿ ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಂ. ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇದ್ದರು. ಶಾಖೆಯ ಸಿಬ್ಬಂದಿಯಾದ ಮೇಘಶ್ರೀ ಸ್ವಾಗತಿಸಿದರು. ಅಶ್ವಿನಿ ವಂದಿಸಿದರು. ಶಾಖಾಧಿಕಾರಿ ಸುಮನ ನಿರೂಪಿಸಿದರು.