ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ಜೂ.28ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರ ವರೆಗೆ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣದಲ್ಲಿ ನಡೆಯಲಿದೆ.
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ಜೂ.28ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರ ವರೆಗೆ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣದಲ್ಲಿ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಎ.ಜೆ.ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರಿನ ನುರಿತ ತಜ್ಞ ವೈದ್ಯರ ತಂಡದಿಂದ ದಂತ ತಪಾಸಣೆ ಮತ್ತು ಸಲಹೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು ಹಾಗೂ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಮಂಗಳೂರಿನ ನುರಿತ ತಜ್ಞ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ.ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.