ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಸ್ಪಂದನ ಮಹಿಳಾ ವಿಭಾಗದ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ನಿರ್ವಹಣೆ, ಸಾಂಸ್ಕೃತಿಕ ಮತ್ತು ಆಹಾರ ಮೇಳ ಸ್ಪರ್ಧೆಯು ಇಂತಹ ದೃಶ್ಯಕ್ಕೆ ಸಾಕ್ಷಿಯಾಗಿತ್ತು.
ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದ ಆಹಾರ ಮೇಳದಲ್ಲಿ, ಕೈಗೆಟುಕುವ ದರದಲ್ಲಿ, ಸಂಪೂರ್ಣ ಡಿಜಿಟಲೀಕರಣದ ಪಾವತಿಯ ಮೂಲಕ ಆಹಾರ ಪ್ರಿಯರಿಗೆ ತಾವು ತಯಾರಿಸಿದ ಖಾದ್ಯಗಳನ್ನು ಉಣಬಡಿಸಿದರು. ಜೊತೆಯಲ್ಲಿ ವೇಳೆ ವಿವಿಧ ನಿರ್ವಹಣಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಭಾಗವಹಿಸಿದ್ದರು.ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ನಾಲ್ಕು ಗೋಡೆಗಳ ನಡುವಿನ ಕಲಿಕೆಯ ಹೊರತಾಗಿ ಕೌಶಲ್ಯತೆಯ ಆಧಾರದಲ್ಲಿ ವ್ಯಕ್ತಿತ್ವ ವಿಕಸನಗೊಳ್ಳಲು ಪಠ್ಯೇತರ ಚಟುವಟಿಕೆಗಳು ಅವಕಾಶ ಮಾಡಿಕೊಡಲಿದೆ. ಸಾಮಾಜಿಕ ನೈಪುಣ್ಯತೆ ಪಡೆಯಲು ಪಠ್ಯೇತರ ಚಟುವಟಿಕೆ ಸಹಕಾರಿ. ಭಾರತೀಯರು ವಿಶ್ವದ ವಿವಿಧ ಕಡೆಗಳಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಸಮಾಜದ ಋಣ ತೀರಿಸಲು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ಹಂಬಲ ಯುವ ಸಮೂಹದ್ದಾಗಬೇಕು. ಹಿರಿಯರಲ್ಲಿದ್ದಂತೆ ಇಂದಿನ ಯುವ ಸಮೂಹದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಾಮರ್ಥ್ಯ ಕುಟಿಂತಗೊಂಡಿದೆ. ರಸ್ತೆ ಬದಿಯ ಚಾಟ್ಸ್ ಗಳಿಗಿಂತ ಮೀರಿದ ರುಚಿ ತಾಯಿಯ ಅಡುಗೆಯಲ್ಲಿದೆ ಅನ್ನುವ ಸತ್ಯ ಅರಿಯಿರಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಲಲಿತ, ಘನಶ್ಯಾಮ್, ಎನ್. ಮಂಜುನಾಥ. , ಜೆ.ನಕ್ಷಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಎ.ಸಿ.ರೂಪಾ ನಿರೂಪಿಸಿದರು.