ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯನ್ನು ಅಸ್ಪಶ್ಯತೆಯಿಂದ ಮುಕ್ತಗೊಳಿಸಿ ಕಾನೂನು ದುರ್ಬಳಕೆಯಾಗದಂತೆ ಮತ್ತು ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕ್ರಮ ವಹಿಸಿಬೇಕು. ಎಲ್ಲರೂ ಸಾಮರಸ್ಯ ಮತ್ತು ಸಮಾನತೆಯಿಂದ ಬದುಕಬೇಕು. ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ಕಾಯ್ದೆ ಜಾರಿಯಲ್ಲಿರುವುದು ಕೇವಲ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕರ್ನಾಟಕ ಮಾತ್ರ. ಕರ್ನಾಟಕದಲ್ಲಿ ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ₹೪೦ ರಿಂದ ₹೫೦ ಕೋಟಿ ಹಣ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ವಾರ್ಷಿಕ ೫೦ ರಿಂದ ೬೦ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದೆ. ಕಳೆದ ೧೦ ವರ್ಷದಲ್ಲಿ ೮೫೦ ಪ್ರಕರಣ ದಾಖಲಾಗಿದ್ದು ₹೧೨ ಕೋಟಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಸಂವಿಧಾನ ಪೀಠಿಕೆ ಭೋಧನೆ ಮಾಡಿದರು.
ವೇದಿಕೆಯಲ್ಲಿ ಮಂಡ್ಯ ಕ್ಷೇತ್ರದ ಶಾಸಕ ಎಂ.ರವಿಕುಮಾರ್, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸತ್ಯಕೀರ್ತಿ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಶಿವಶರಣ ಮಾದರಚನ್ನಯ್ಯ ಸ್ವಾಮೀಜಿ, ಕಲಬುರಗಿಯ ಕೋಡ್ಲಾ ಶ್ರೀ ಉರಿಲಿಂಗ ಪೆದ್ದೀಶ್ವರ ಮಹಾಸಂಸ್ಥಾನ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಆನಂದ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.