ದೌರ್ಜನ್ಯ ಪ್ರಕರಣಗಳ ವಿಚಾರಣೆ ತ್ವರಿತ ನ್ಯಾಯಾಲಯಗಳಲ್ಲಿ ನಡೆಯಲಿ: ಪಿ.ಯಶೋಧ

KannadaprabhaNewsNetwork |  
Published : Feb 25, 2026, 02:00 AM IST
24ಕೆಎಂಎನ್ ಡಿ22 | Kannada Prabha

ಸಾರಾಂಶ

ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಅಸಮರ್ಪಕ ತನಿಖೆ ಕಾರ್ಯವೈಖರಿಯಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ಜನರ ಮೇಲೆ ದೌರ್ಜನಗಳು ಹೆಚ್ಚಾಗುತ್ತಿವೆ. ಸಾಕ್ಷಾಧಾರಗಳ ಕೊರತೆಯಿಂದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಕಡಿಮೆಯಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ತ್ವರಿತ ನ್ಯಾಯಾಲಯಗಳ ಮೂಲಕ ವಿಚಾರಣೆ ನಡೆಸುವುದು ಸೂಕ್ತ ಎಂದು ಪಂಗಡಗಳ ಮೇಲ್ವಿಚಾರ ಸಮಿತಿ ರಾಜ್ಯ ಸಂಚಾಲಕಿ ಪಿ.ಯಶೋಧ ಹೇಳಿದರು.

ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ತಾಲೂಕ ಆಡಳಿತ, ತಾಪಂ, ನಗರಸಭೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಅಧಿನಿಯಮ ಮತ್ತು ನಾಗರೀಕ ಹಕ್ಕು ರಕ್ಷಣಾಕಾಯ್ದೆ ಕುರಿತ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರದಲ್ಲಿ ವಿಚಾರ ಮಂಡಿಸಿದರು.

ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಅಸಮರ್ಪಕ ತನಿಖೆ ಕಾರ್ಯವೈಖರಿಯಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ಜನರ ಮೇಲೆ ದೌರ್ಜನಗಳು ಹೆಚ್ಚಾಗುತ್ತಿವೆ. ಸಾಕ್ಷಾಧಾರಗಳ ಕೊರತೆಯಿಂದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೌರ್ಜನ್ಯ ಪ್ರಕರಣಗಳ ಸಮಿತಿ ಅಧ್ಯಕ್ಷರು, ಜಿಲ್ಲಾಧಿಕಾರಿಗಳು ಸರಿಯಾದ ರೀತಿಯಲ್ಲಿ ಪ್ರಕರಣಗಳ ವಿಮರ್ಶೆ ಮಾಡಿ ನೊಂದವರಿಗೆ ಪುನರ್ವಸತಿ ಕಲ್ಪಿಸಲು ವಿಫಲರಾಗಿದ್ದಾರೆ. ಇದರಿಂದ ದೀರ್ಘ ಕಾಲದವರೆಗೆ ಮೊಕದ್ದಮ್ಮೆಗಳ ವಿಚಾರಣೆ ವಿಳಂಬ ಆಗುವ ಜೊತೆಗೆ ಸಾಕ್ಷಿ ನಾಶಕ್ಕೆ ಕಾರಣವಾಗುತ್ತಿದೆ. ಸರ್ಕಾರ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ತ್ವರಿತ ನ್ಯಾಯಾಲಯಗಳ ಮೂಲಕ ವಿಚಾರಣೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.‌

ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಯೋಜನೆಗೆ 2.97 ಲಕ್ಷ ಕೋಟಿ ಹಣವನ್ನು ಈವರೆಗೆ ಖರ್ಚು ಮಾಡಲಾಗಿದೆ. ಆದರೂ ಸಹ ಅವರ ಆರ್ಥಿಕ ಮತ್ತು ಶೈಕ್ಷಣಿಕ ಮಟ್ಟ ಸುಧಾರಣೆ ಆಗದಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ವಿಚಾರಗೋಷ್ಠಿ ಉದ್ಘಾಟಿಸಿದ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಎಸ್.ಸಿ.ನಳಿನ ಮಾತನಾಡಿ, ಪರಿಶಿಷ್ಟಜಾತಿ ಮತ್ತು ಪಂಗಡಗಳ ಜನರು ಕೇವಲ ಅಂಬೇಡ್ಕರ್ ಫೋಟೋಗಳಿಗೆ ಪೂಜೆ ಮಾಡುವುದನ್ನು ಬಿಟ್ಟು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಕನಸನ್ನು ನನಸು ಮಾಡಬೇಕು ಎಂದರು.

ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು ಪ್ರತಿಜ್ಞಾವಿಧಿ ಬೋಧಿಸಿದರು. ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಎಸ್.ಬಿ.ಯಶ್ವಂತ್ ಕುಮಾರ, ವೃತ್ತ ನಿರೀಕ್ಷಕರಾದ ಎಚ್.ಎಸ್.ನವೀನ, ನಾರಾಯಣಿ, ಜಿ.ಎಸ್.ಅನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ, ಎಸ್ಸಿ,ಎಸ್ಟಿ ಜಾಗೃತಿ ಸಮಿತಿ ಸದಸ್ಯ ಚಿದಂಬರ್, ತಾಪಂ ಇಓ ರಾಮಲಿಂಗಯ್ಯ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಡುಗೊಲ್ಲರ ಸಾಂಪ್ರದಾಯಿಕ ಆಚರಣೆಗಳು ಮುಂದುವರಿಯಬೇಕು
ಜಯಂತಿಯಂತೆ ರಾಘವೇಂದ್ರ ಸ್ವಾಮಿ ಉತ್ಸವ ಆಚರಿಸಿ: ಸುವಿದ್ಯೇಂದ್ರ ತೀರ್ಥರು