ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಯುವತಿ ಈ ಘಟನೆಯನ್ನು ಬಜರಂಗದಳ ಸಂಘಟನೆಯವರಿಗೆ ತಿಳಿಸಿದ್ದಾಳೆ. ತಕ್ಷಣ ಕೇಶ್ವಾಪುರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಜರಂಗದಳ ಸದಸ್ಯರು ದೂರು ದಾಖಲಿಸಿಕೊಂಡು ಆರೋಪಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ಬಜರಂಗದಳದ ಕಾರ್ಯಕರ್ತ ರಘು ಯಲ್ಲಪ್ಪನವರ ಮಾಧ್ಯಮದವರೊಂದಿಗೆ ಮಾತನಾಡಿ, ಮುಸ್ಲಿಂ ಸಮುದಾಯದ ಅಫ್ತಾಬ್, ಪ್ರೀತಿ ಮಾಡು ಎಂದು ಯುವತಿಯನ್ನು ಪೀಡಿಸುತ್ತಿದ್ದ. ಯುವತಿ ಅದನ್ನು ಕಡೆಗಣಿಸಿದ್ದಳು. ಆದ್ದರಿಂದ ಅವಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿದರು.ನೇಹಾ ಕೇಸ್ : ಸಿಐಡಿ ತನಿಖೆ ಶುರು ಹುಬ್ಬಳ್ಳಿಗೆ ತಂಡ ಆಗಮನ, ಮಾಹಿತಿ ಸಂಗ್ರಹ
ಇಲ್ಲಿನ ಬಿವಿಬಿ ಕ್ಯಾಂಪಸ್‌ನಲ್ಲಿ ಹಾಡಹಗಲೇ ಹತ್ಯೆಗೀಡಾದ ನೇಹಾ ಹಿರೇಮಠ ತನಿಖೆಯನ್ನು ಸಿಐಡಿಯೂ ಮಂಗಳವಾರ ಶುರು ಮಾಡಿದೆ.ಸರ್ಕಾರ ಈ ಪ್ರಕರಣವನ್ನು ಪೊಲೀಸ್ ಇಲಾಖೆಯಿಂದ ಸಿಐಡಿಗೆ ವಹಿಸುತ್ತಿದ್ದಂತೆ ಸೋಮವಾರ ರಾತ್ರಿಯೇ ನಗರಕ್ಕೆ ಆಗಮಿಸಿದ ತಂಡ ಮಂಗಳವಾರ ತನಿಖೆ ಶುರು ಮಾಡಿತು. ಮಂಗಳವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಜತೆಗೆ ಚರ್ಚೆ ನಡೆಸಿ ಪ್ರಕರಣದ ಮಾಹಿತಿ ಪಡೆಯಿತು. ಅಲ್ಲದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ ಆಗಿರುವ ತನಿಖೆಯ ಕಡತಗಳನ್ನು ವಶಕ್ಕೆ ಪಡೆಯಿತು. ಬಳಿಕ ಕೊಲೆ ನಡೆದ ಬಿವಿಬಿ ಕ್ಯಾಂಪಸ್‌ಗೆ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ನೇಹಾ ಫೋಟೊ ವೈರಲ್: ತಾಯಿ ಗೀತಾ ದೂರು
ನಿರಂಜನ್ ನನ್ನನ್ನು ಕ್ಷಮಿಸಿ, ನಿಮ್ಮೊಂದಿಗೆ ನಾವಿದ್ದೇವೆ: ಸಿಎಂ
ಇಲ್ಲಿನ ಮೃತ ನೇಹಾ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಕೆ. ಪಾಟೀಲ ಅವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮೃತಳ ತಂದೆಯೊಂದಿಗೆ ಮಾತನಾಡಿಸಿದರು.ಈ ಪ್ರಕರಣ ನಮಗೂ ನೋವುಂಟು ಮಾಡಿದೆ. ಚುನಾವಣಾ ಕಾರ್ಯಗಳ ನಿಮಿತ್ತ ನಿಮ್ಮ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲು ಸಾಧ್ಯವಾಗಲಿಲ್ಲ. ಸರ್ಕಾರ ನಿಮ್ಮೊಂದಿಗಿದ್ದು, ನೇಹಾಳ ಸಾವಿಗೆ ಸೂಕ್ತ ನ್ಯಾಯ ಕೊಡಿಸಲು ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಸಂಶಯ ಬೇಡ. ಹುಬ್ಬಳ್ಳಿಗೆ ಬಂದಾಗ ಮನೆಗೆ ಬಂದು ಭೇಟಿ ನೀಡುವುದಾಗಿ ತಿಳಿಸಿದರು.
ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿರುವುದಕ್ಕೆ ನಿರಂಜನ್ ಧನ್ಯವಾದ ತಿಳಿಸಿದರು. ಈ ವೇಳೆ ಸಚಿವ ಎಚ್.ಕೆ. ಪಾಟೀಲ, ಶಾಸಕ ಪ್ರಸಾದ ಅಬ್ಬಯ್ಯ ಸೇರಿದಂತೆ ಹಲವರಿದ್ದರು.ಜೈಲಲ್ಲಿರುವ ಫಯಾಜ್ ಮೊಬೈಲ್‌ನಲ್ಲಿನ ಫೋಟೋ ಲೀಕ್ ಆಗಿದ್ದು ಹೇಗೆ?: ಜೋಶಿ
ಹಿಂದೂ ನೆಲೆಗಟ್ಟಿನ, ಹಿಂದೂ ಸಮಾಜ-ಸಂಘಟನೆ ಗಟ್ಟಿಯಾಗಿರುವ ಹುಬ್ಬಳ್ಳಿ ನೆಲದಲ್ಲೇ ಹೀಗಾಗಿರುವಾಗ ಇನ್ನು ರಾಜ್ಯದ ಬೇರೆಡೆ ಸ್ಥಿತಿ ಏನಾಗಿರಬೇಡ? ಎಂದು ಆತಂಕ ವ್ಯಕ್ತಪಡಿಸಿದರು. ತುಷ್ಟೀಕರಣ ಮಾಡುವವರನ್ನು ಮೊದಲು ಅಧಿಕಾರದಿಂದ ಕಿತ್ತು ಹಾಕಬೇಕು. ಇಲ್ಲದಿದ್ದರೆ ನಮ್ಮ ಮನೆಗಳಲ್ಲೂ ನಾವು ಹಿಂದೂ ಧರ್ಮ-ಸಂಸ್ಕೃತಿ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಎಚ್ಚರಿಸಿದರು.ನೇಹಾ ನಿವಾಸಕ್ಕೆ ವಿಜಯೇಂದ್ರ ಭೇಟಿ, ಸಾಂತ್ವನ
ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಆದರೆ, ತನಿಖೆಯ ಬೆಳವಣಿಗೆ ಗಮನಿಸಿದರೆ ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ಭರವಸೆ ನಮಗೆ ಹಾಗೂ ಕುಟುಂಬಕ್ಕಿಲ್ಲ. ಸಚಿವರ ಹೇಳಿಕೆ ಗಮನಿಸಿದರೆ ಪರೋಕ್ಷವಾಗಿ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣವನ್ನು ರಾಜಕಾರಣಕ್ಕೆ ಬಳಸಿಕೊಳ್ಳುವ ಅವಶ್ಯಕತೆ ಪಕ್ಷಕ್ಕಿಲ್ಲ. ಯಾರು ಕೂಡ ಇದನ್ನು ಜಾತಿ, ಧರ್ಮಕ್ಕೆ ಬಳಸಿಕೊಳ್ಳಬಾರದು ಎಂದರು.----------ಈ ಕೊಲೆ ಪ್ರಕರಣದಲ್ಲಿ ಇನ್ನೂ ನಾಲ್ಕು ಮಂದಿ ಆರೋಪಿಗಳಿದ್ದಾರೆ ಎಂದು ನೇಹಾ ತಂದೆ ನಿರಂಜನ ಅವರೇ ಹೇಳುತ್ತಿದ್ದಾರೆ. ಆದರೆ, ಈವರೆಗೂ ಪೊಲೀಸರು ಅವರನ್ನು ಬಂಧಿಸಿಲ್ಲ. ಸಿಐಡಿ ಅಧಿಕಾರಿಗಳು ಸಹ ವಿಚಾರಣೆಗೆ ಒಳಪಡಿಸದೇ ಇರುವುದು ಸಂಶಯಕ್ಕೆ ಕಾರಣವಾಗಿದೆ. ಇದನ್ನೆಲ್ಲ ಗಮನಿಸಿದರೆ ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಬಹುದು ಎನ್ನುವ ಅನುಮಾನ ನಮಗೆ ಮೂಡುತ್ತಿದೆ ಎಂದರು.
ನೊಂದ ಹೆತ್ತವರಿಗೆ ಸಮಾಧಾನವಾಗುವ ರೀತಿಯಲ್ಲಿ ವರ್ತಿಸುವ ಕಾರ್ಯ ಮಾಡಬೇಕಿದೆ. ಆದರೆ, ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸವಾಲು ಎದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಸಿಐಡಿಯಿಂದ ಸಿಬಿಐ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದರು.ಮಾನವೀಯತೆ ಮರೆತು ವರ್ತಿಸುವುದು ಕಾಂಗ್ರೆಸ್ ಸಂಸ್ಕೃತಿ:ಹಿಂದುಗಳು ಕೊಲೆಯಾದರೆ ಬಿಜೆಪಿಗೆ ಹಬ್ಬ ಎನ್ನುವ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನ ನಿವಾಸಕ್ಕೆ ಬೆಂಕಿ ಹಚ್ಚಿದಾಗ, ಕಾಂಗ್ರೆಸ್ ಸರ್ಕಾರ ಅವರಿಗೆ ಸಾಂತ್ವನ ಸಹ ಹೇಳಲು ಹೋಗಲಿಲ್ಲ. ಮಾನವೀಯತೆ ಮರೆತು ವರ್ತಿಸುವುದು ಕಾಂಗ್ರೆಸ್ ಸಂಸ್ಕೃತಿ. ಇಂತಹ ಪ್ರಕರಣದಲ್ಲಿ ರಾಜಕೀಯ ಬಿಟ್ಟು ಮನುಷ್ಯತ್ವದ ಆಧಾರದಲ್ಲಿ ಧೈರ್ಯ ತುಂಬಬೇಕು ಎಂದರು.ಮಾಹಿತಿ ಇಲ್ಲದೆ ಕಾಂಗ್ರೆಸ್ ವಿರುದ್ಧ ಹೇಳಿದ್ದಕ್ಕೆ ಕ್ಷಮಿಸಿ: ನೇಹಾ ತಂದೆ
ಮಾಹಿತಿ ಕೊರತೆಯಿಂದಾಗಿ ಸ್ಥಳೀಯ ಶಾಸಕರ, ಪೊಲೀಸರ ಹಾಗೂ ಕಾಂಗ್ರೆಸ್ ನಾಯಕರ, ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದೆ, ನನ್ನಿಂದಾಗಿರುವ ಈ ತಪ್ಪಿಗೆ ಕ್ಷಮೆ ಕೋರುತ್ತೇನೆ ಎಂದು ನೇಹಾ ತಂದೆ ನಿರಂಜನ ಹಿರೇಮಠ ಮೂರು ದಿನಗಳ ಬಳಿಕ ಹಿಂದಿನ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ.ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀವ್ರ ದುಃಖದಲ್ಲಿದ್ದ ನಾನು ನನ್ನ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂಬ ಆತಂಕದಿಂದಾಗಿ ಈ ರೀತಿಯ ಹೇಳಿಕೆ ನೀಡಿದ್ದೆ. ಅಂತ್ಯಕ್ರಿಯೆವರೆಗೂ ನನ್ನ ಜತೆಯಲ್ಲಿದ್ದ ನನ್ನವರು, ನಂತರ ಕಾಣಲಿಲ್ಲ. ಆಗ, ನನಗೆ ಭಯವಾಗಿ ಮಾಹಿತಿಯ ಕೊರತೆಯಿಂದಾಗಿ ತಪ್ಪು ಹೇಳಿಕೆ ನೀಡಿದ್ದೆ. ಆದರೆ, ಪ್ರಕರಣ ನಡೆದಿರುವ ಕುರಿತು ನಮ್ಮ ಪಕ್ಷದವರೇ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ ಎಂಬುದು ನನಗೆ ಸೋಮವಾರ ತಿಳಿಯಿತು ಎಂದರು.ನಮ್ಮ ಪಕ್ಷದವರು ತೆರೆಮರೆಯಲ್ಲಿ ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಇದೀಗ ಪ್ರಕರಣ ಸಿಐಡಿಗೆ ವಹಿಸುವಲ್ಲಿಯೂ ಅವರ ಪಾತ್ರ ಪ್ರಮುಖವಾಗಿದೆ. ಪೊಲೀಸ್ ಆಯುಕ್ತರು ಸಹ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಅವರ ವಿರುದ್ಧವೂ ನಾನು ಅಸಮಾಧಾನ ವ್ಯಕ್ತಪಡಿಸಿದ್ದೆ. ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದ ನಾನು ಏನೇ ತಪ್ಪು ಮಾತನಾಡಿದರೂ ಅನ್ಯತಾ ಭಾವಿಸಬಾರದು. ನನ್ನಿಂದಾದ ತಪ್ಪಿಗೆ ಎಲ್ಲರಿಗೂ ಕ್ಷಮೆ ಕೋರುವುದಾಗಿ ಹೇಳಿದರು.
ಇಂತಹ ಪ್ರಕರಣ ನಡೆದಾಗ ಸೂಕ್ತ ಕ್ರಮಕೈಗೊಳ್ಳಲು ವಿಶೇಷ ಕಾನೂನು ರಚಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆ ಕಾನೂನಿಗೆ ''''''''ನೇಹಾ ಹಿರೇಮಠ ಕಾಯ್ದೆ'''''''' ಎಂದು ಹೆಸರಿಡಲು ಮನವಿ ಮಾಡಿದ ಅವರು, ಅಂತಹ ಕಾಯ್ದೆ ಜಾರಿಗೆ ಬಂದಲ್ಲಿ ಇಂತಹ ಕೃತ್ಯಕ್ಕೆ ಕೈಹಾಕುವವರಿಗೆ ಭಯ ಹುಟ್ಟಿಸುತ್ತದೆ. ಮತ್ತೊಂದು ಇಂತಹ ಪ್ರಕರಣ ಎಲ್ಲಿಯೂ ಮರುಕಳಿಸದಂತೆ ಸರ್ಕಾರ ಕ್ರಮಕೈಗೊಳ್ಳಲಿ ಎಂದು ಮನವಿ ಮಾಡಿದರು.