ರಾಣಿಬೆನ್ನೂರು: ಒಂದು ಕೋಮಿನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮತ್ತೊಂದು ಕೋಮಿನ ವೈದ್ಯನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಕೋಟೆ ಓಣಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಶಹರ ಪೊಲೀಸ್ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಇಲ್ಲಿಯ ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ಗಂಗಾಧರಯ್ಯ ರಾಚೋಟಿಮಠ (46) ಎಂಬವರ ಮೇಲೆ ಹಲ್ಲೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಕ್ಸೂದ್ ಮೊಮೀನ್, ಸೈಯದ್ ಅಹ್ಮದ್ ಮಕಾಂದಾರ, ಸೈಯದ್ ಹೊನ್ನಾಳಿ, ಜಾಫರಸಾದಿಕ್ ಕಿಲ್ಲೇದಾರ, ಅಬ್ದುಲ್ ಮೊನಾಫ್ ಮೊಮೀನ್ ಸೇರಿ 20ರಿಂದ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.ಡಾ. ಗುರುಮೂರ್ತಯ್ಯನ ಕ್ಲಿನಿಕ್‌ಗೆ ನುಗ್ಗಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಲ್ಲದೆ ವೈದ್ಯರ ಕ್ಲಿನಿಕ್ ಎದುರು ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಬೈಕ್ ಎತ್ತಿ ಬಿಸಾಕಿದ್ದು, ಅದು ಕೂಡ ಜಖಂ ಆಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ವೈದ್ಯರನ್ನು ರಕ್ಷಿಸಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಠಾಣೆಗೆ ಕರೆತಂದಿದ್ದಾರೆ.ವೈದ್ಯರ ವಿರುದ್ಧ ದೂರು: ಮಹ್ಮದಜಾರ್ ಖಲೀಲಅಹ್ಮದ್ ಮೊಮೀನ್ (37) ಎಂಬವರು ವೈದ್ಯರ ಮೇಲೆ ಪ್ರತಿದೂರು ನೀಡಿದ್ದಾರೆ. ನನ್ನ ಅಕ್ಕನ ಮಗನನ್ನು ವೈದ್ಯರ ಬಳಿ ತೋರಿಸಲು ಹೋದಾಗ ನಮ್ಮ ಸಂಬಂಧಿಕರಿಗೆ ಪೆಹಲ್ಗಾಂನಲ್ಲಿ ಮುಸ್ಲಿಮರು ಹೊಡೆದಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುತ್ತಾರೆ. ಇದಲ್ಲದೆ ಹತ್ತು- ಇಪ್ಪತ್ತು ಮಕ್ಕಳನ್ನು ಹಡಿತೀರಿ ಮುಂತಾದ ರೀತಿಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಹಾವೇರಿ: ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆಕಾಲಿಕ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಮನೋಭಾವನೆಯೊಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು.
ಅ. 4ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಲ ಪ್ರಾಧಿಕಾರ, ನ್ಯಾಯಾಲಯಗಳ ಆವರಣ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾವೇರಿ ಈ ವಿಳಾಸದಲ್ಲಿ ಸಂಪರ್ಕಿಸಬಹುದೆಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.