ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಪುರುಷೋತಮ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮಾಜದ ಮುಖಂಡರು, ಕೆರೆಗೂಡು ಧ್ವಜ ಪ್ರಕರಣಕ್ಕೂ ಕುರುಬ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಕಿಡಿಗೇಡಿಗಳು ಕುರುಬ ಸಮುದಾಯದ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಿದರು.
ಕನದಾಸರು ಮತ್ತು ಸಂಗೊಳ್ಳಿ ರಾಯಣ್ಣ , ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹರಿಯುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಗಲಭೆಕೋರರನ್ನು ಬಂಧಿಸಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ತಹಸೀಲ್ದಾರ್ ನಿಸರ್ಗಪ್ರಿಯಾಗೆ ಮನವಿ ಸಲ್ಲಿಸಿದರು.ಈ ವೇಳೆ ಮುಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಕೊಡಿಮಾರನಹಳ್ಳಿ ದೇವರಾಜು, ಬಿ.ನಾಗೇಂದ್ರ ಕುಮಾರ್, ತಾಪಂ ಮಾಜಿ ಸದಸ್ಯರಾದ ಶಾಮಣ್ಣ, ಸಣ್ಣಲಿಂಗೇಗೌಡ, ಪುರಸಭೆ ಸದಸ್ಯರಾದ ಕೆ.ಆರ್. ರವೀಂದ್ರಬಾಬು, ಸ್ನೇಹಿತ ರಮೇಶ್, ಸಮುದಾಯ ಮುಖಂಡರಾದ ಗುಡುಗನಹಳ್ಳಿ ರಾಯಪ್ಪ, ವಿನೋದ್ ಕುಮಾರ್, ಚಂದ್ರೆಗೌಡ, ದಿವಾಕರ್, ಕೂಡಲಕುಪ್ಪೆ ಕೃಷ್ಣೇಗೌಡ, ರುಕ್ಮಾಂಗದ, ರಘು, ವಕೀಲ ಗೋವಿಂದೇಗೌಡ, ರಾಜಣ್ಣ, ಚಿಕ್ಕಣ್ಣ, ರಾಜೇಶ್, ಕಾಡುಮೆಣಸ ಚಂದ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.