ನೆರೆಯ ಬಾಂಗ್ಲಾದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಪ್ರಸ್ತುತ ಬಾಂಗ್ಲಾದೇಶ ತೀವ್ರ ಹಿಂಸಾಚಾರದಿಂದ ನರಳುತ್ತಿದೆ. ಇದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಹಿಂದುಗಳ ಮನೆಗಳನ್ನು ಗುರಿ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಮುಂದಾಗುವಂತೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಪುತ್ತೂರು
ನೆರೆಯ ಬಾಂಗ್ಲಾದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಪ್ರಸ್ತುತ ಬಾಂಗ್ಲಾದೇಶ ತೀವ್ರ ಹಿಂಸಾಚಾರದಿಂದ ನರಳುತ್ತಿದೆ. ಇದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಹಿಂದುಗಳ ಮನೆಗಳನ್ನು ಗುರಿ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಮುಂದಾಗುವಂತೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ.ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬಾಂಗ್ಲಾದೇಶದಲ್ಲಿ ಈಗಾಗಲೇ ನೂರಾರು ಹಿಂದೂ ದೇವಳಗಳನ್ನು ನಾಶ ಮಾಡಲಾಗಿದೆ. ಪ್ರಸ್ತುತ ಬಾಂಗ್ಲಾದಲ್ಲಿ ಶೇ.೮ರಷ್ಟಿರುವ ಹಿಂದೂ ಸಮುದಾಯ ನಿರಂತರವಾಗಿ ಜಿಹಾದಿಗಳ ಕಿರುಕುಳಕ್ಕೆ ಬಲಿಯಾಗುತ್ತಿದೆ. ಈ ಗೊಂದಲಮಯ ಪರಿಸ್ಥಿತಿಯಲ್ಲಿ ಅಲ್ಲಿನ ತೀವ್ರಗಾಮಿ ಜಿಹಾದಿ ಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡ ಪ್ರಮಾಣದ ದಾಳಿಯನ್ನು ಪ್ರಾರಂಭಿಸಿವೆ. ಮನೆಗಳು, ಮಠಗಳು, ಅಂಗಡಿಗಳು, ಕಚೇರಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಮಹಿಳೆಯರು, ಮಕ್ಕಳು ಬಾಂಗ್ಲಾದೇಶದಲ್ಲಿ ಸುರಕ್ಷಿತವಾಗಿಲ್ಲ. ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ತುಂಬಾ ಹದಗೆಡುತ್ತಿದೆ ಎಂದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸುರಕ್ಷತೆಗಾಗಿ ಮತ್ತು ಅವರ ಮಾನವ ಹಕ್ಕುಗಳನ್ನು ರಕ್ಷಿಸಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವುದು ವಿಶ್ವ ಸಮುದಾಯದ ಜವಾಬ್ದಾರಿಯಾಗಿದೆ. ಭಾರತವು ಸಾಂಪ್ರದಾಯಿಕವಾಗಿ ಪ್ರಪಂಚದಾದ್ಯಂತ ಕಿರುಕುಳಕ್ಕೊಳಗಾದ ವಲಸಿಗರಿಗೆ ಸಹಾಯ ಮಾಡಿಕೊಂಡು ಬಂದಿರುವಂತೆ ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಭಾರತ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ನವೀನ್ ನರಿಯ, ಕೋಶಾಧಿಕಾರಿ ಮಾಧವ ಪೂಜಾರಿ, ಸಂಘಟನಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.