ಹಳೆಯಂಗಡಿ: ಅಕ್ರಮ ಮರಳುಗಾರಿಕೆಗೆ ದಾಳಿ

KannadaprabhaNewsNetwork | Published : Jan 16, 2024 1:45 AM

ಸಾರಾಂಶ

ನಂದಿನಿ ನದಿಯಲ್ಲಿ ಅಪರಿಚಿತರು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆ ಅಧಿಕಾರಿಗಳು, ಇತರ ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮೂಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಕೊಪ್ಪಳದಲ್ಲಿ ನಂದಿನಿ ನದಿಯಲ್ಲಿ ಅಪರಿಚಿತರು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆ ಅಧಿಕಾರಿಗಳು, ಇತರ ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಈ ಸಂದರ್ಭ ನಂದಿನಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳು ಬಿಟ್ಟುಹೋದ 4 ಕಬ್ಬಿಣದ ದೋಣಿಗಳನ್ನು ಮತ್ತು ದೋಣಿಗಳ ಒಳಗಡೆ ಇದ್ದ ಸುಮಾರು ಒಂದರಿಂದ ಎರಡು ಬುಟ್ಟಿ ಮರಳನ್ನು ಸ್ವಾದೀನಪಡಿಸಿಕೊಳ್ಳಲಾಗಿದೆ.

4 ದೋಣಿಗಳ ಅಂದಾಜು ಮೌಲ್ಯ 6 ಲಕ್ಷ ರು. ಹಾಗೂ ಸ್ವಾಧೀನ ಪಡಿಸಿಕೊಂಡ ಮರಳಿನ ಅಂದಾಜು ಮೌಲ್ಯ 1,500 ರು. ಆಗಿರುತ್ತದೆ. ಈ ಬಗ್ಗೆ ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಸ್‌ನಿಂದ ಎಸೆಯಲ್ಪಟ್ಟು ಚಕ್ರಕ್ಕೆ ಸಿಲುಕಿ ಮಹಿಳೆ ಸಾವುಮಂಗಳೂರು: ಖಾಸಗಿ ಬಸ್‌ ಚಾಲಕ ಹಠಾತ್ ಬ್ರೇಕ್‌ ಹಾಕಿದ ಪರಿಣಾಮ ಮಹಿಳೆ ಕೆಳಕ್ಕೆ ಎಸೆಯಲ್ಪಟ್ಟು ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ಸುರತ್ಕಲ್‌ನ ಜೋಕಟ್ಟೆಯಲ್ಲಿ ಸೋಮವಾರ ಸಂಭವಿಸಿದೆ. ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ(65) ಮೃತ ದುರ್ದೈವಿ. ಈಕೆ ತನ್ನ ಪುತ್ರಿ ಜತೆ ಬೆಳಗ್ಗೆ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದರು. ಜೋಕಟ್ಟೆ ಕ್ರಾಸ್‌ ತಲುಪಿದಾಗ ಚಾಲಕ ಹಠಾತ್‌ ಬ್ರೇಕ್ ಹಾಕಿದ್ದು, ಚಾಲಕನ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಮುಗ್ಗರಿಸಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ. ಆಗ ಅವರ ತಲೆ ಮೇಲೆ ಬಸ್‌ ಚಲಿಸಿದೆ. ಇದರಿಂದ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಚಾಲಕನ ವಿರುದ್ಧ ಕೇಸು ದಾಖಲಿಸಿ ಬಂಧಿಸಲಾಗಿದೆ. ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಖಾಸಗಿ ಬಸ್‌ ಚಾಲಕ ಹಠಾತ್ ಬ್ರೇಕ್‌ ಹಾಕಿದ ಪರಿಣಾಮ ಮಹಿಳೆ ಕೆಳಕ್ಕೆ ಎಸೆಯಲ್ಪಟ್ಟು ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ಸುರತ್ಕಲ್‌ನ ಜೋಕಟ್ಟೆಯಲ್ಲಿ ಸೋಮವಾರ ಸಂಭವಿಸಿದೆ. ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ(65) ಮೃತ ದುರ್ದೈವಿ. ಈಕೆ ತನ್ನ ಪುತ್ರಿ ಜತೆ ಬೆಳಗ್ಗೆ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದರು. ಜೋಕಟ್ಟೆ ಕ್ರಾಸ್‌ ತಲುಪಿದಾಗ ಚಾಲಕ ಹಠಾತ್‌ ಬ್ರೇಕ್ ಹಾಕಿದ್ದು, ಚಾಲಕನ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಮುಗ್ಗರಿಸಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ. ಆಗ ಅವರ ತಲೆ ಮೇಲೆ ಬಸ್‌ ಚಲಿಸಿದೆ. ಇದರಿಂದ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಚಾಲಕನ ವಿರುದ್ಧ ಕೇಸು ದಾಖಲಿಸಿ ಬಂಧಿಸಲಾಗಿದೆ. ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆಡುತ್ತಿದ್ದ ಬಾಲಕ ಬಾವಿಗೆ ಬಿದ್ದು ಸಾವು

ಬೆಳ್ತಂಗಡಿ: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಪಣಕಜೆ ನಿವಾಸಿ ಮಹಮ್ಮದ್‌ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭) ಮೃತಪಟ್ಟ ಬಾಲಕ.ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share this article