ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ
ಗದಗ: ಡಾ. ವೆಂಕಟೇಶ ರಾಥೋಡ್ ಜಿಲ್ಲಾ ಸಮೀಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ಸೋಮವಾರ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕು ತಂಬಾಕು ನಿಯಂತ್ರಣ ತನಿಖಾದಳ ನಗರದ ಚೆನ್ನಮ್ಮ ವೃತ್ತ ಹಾಗೂ ಕಳಸಾಪುರ ರಸ್ತೆಯಲ್ಲಿ ಕೋಟ್ಪಾ ದಾಳಿ ನಡೆಸಿತು.ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಆ ಸ್ಥಳದ ಮಾಲೀಕರ ಜವಾಬ್ದಾರಿಯಾಗಿರುತ್ತದೆ. ಚಹಾ ಅಂಗಡಿ, ಪಾನ ಶಾಪ್, ಅಂಗಡಿಗಳ ಒಳಗಡೆ ಸುಮಾರು ಅನಧಿಕೃತ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡು, ಧೂಮಪಾನ ಮಾಡದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮ ಬೀರಿ ಅವರು ತಂಬಾಕಿನಿಂದ ಉಂಟಾಗುವ ಕಾಯಿಲೆಗಳಿಗೆ ಬಲಿಯಾಗುತ್ತಿರುವುದರಿಂದ ಇಂತಹ ಅಡ್ಡಾಗಳನ್ನು ಬಂದ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳಲಾಯಿತು.ತಂಬಾಕು ಮುಕ್ತ ಯುವ ಪೀಳಿಗೆ ಮಾಡುವ ನಿಟ್ಟಿನಲ್ಲಿ ಶಾಲಾ-ಕಾಲೇಜು ಆವರಣದಿಂದ ೧೦೦ ಗಜದ ವರೆಗೆ ತಂಬಾಕು ಮಾರಾಟ ನಿಷೇಧ. ತಂಬಾಕು ಕುರಿತ ಜಾಹಿರಾತು ನಿಷೇಧಿಸುವದು, ೧೮ ವರ್ಷದೋಳಗಿನವರಿಗೆ ತಂಬಾಕು ನಿಷೇಧಿಸುವದು, ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ ೮೫% ರಷ್ಟು ಅರೋಗ್ಯ ಎಚ್ಚರಿಕೆ ಚಿಹ್ನೆ ಕಡ್ಡಾಯ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಎಚ್ಚರಿಕೆ ನೀಡಿ ಒಟ್ಟು ೧೭ ಪ್ರಕರಣ ದಾಖಲಿಸಿ ರು. ೨೮೦೦ ದಂಡ ಸಂಗ್ರಹಿಸಲಾಯಿತು. ರಾಜ್ಯದಲ್ಲಿ ತಂಬಾಕು ಉತ್ಪನ್ನಗಳು ಕಾನೂನು ಬದ್ಧವಾಗಿದ್ದರು ಅವುಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿ ಕ್ರಮ ವಹಿಸಲಾಗುವದು.
ಈ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ಪಿಎಸ್‌ಐ ಬಿ.ಆರ್.ಬಂಕಾಪುರ, ಎ.ಆರ್.ಪಾಟೀಲ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೈ.ಎನ್. ಕಡೆಮನಿ ಸೇರಿ ಇತರರು ಇದ್ದರು.