ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ, ಖಂಡನೆ

KannadaprabhaNewsNetwork |  
Published : Apr 24, 2025, 12:02 AM IST
23ಉಳಉ5 | Kannada Prabha

ಸಾರಾಂಶ

ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ದೇಶವನ್ನು ಬೆಚ್ಚಿಬೀಳಿಸಿದೆ. ಶಾಂತವಾಗಿದ್ದ ಕಾಶ್ಮೀರದಲ್ಲಿ ಮತ್ತೆ ರಕ್ತಪಾತ ನಡೆದಿದೆ. ಉಗ್ರರ ವಿರುದ್ಧ ಆಕ್ರೋಶ, ಭಯೋತ್ಪಾದನೆ ವಿರುದ್ಧದ ಸಮರವನ್ನು ಮತ್ತಷ್ಟು ತೀವ್ರಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಗಂಗಾವತಿ:

ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆದಿರುವುದನ್ನು ಕರವೇ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ತಹಸೀಲ್ದಾರರಿಗೆ ಮನವಿ ಸಲ್ಲಿಸಿದ ಕರವೇ ಜಿಲ್ಲಾಧ್ಯಕ್ಷ ಪಂಪಣ್ಣನಾಯಕ ಮಾತನಾಡಿ, ದೇಶದಲ್ಲಿ ಸಂಪೂರ್ಣವಾಗಿ ಉಗ್ರ ಸಂಘಟನೆಗಳನ್ನು ನಿಷೇಧಿಸಬೇಕು. ನಮ್ಮ ರಾಜ್ಯದಲ್ಲಿ ಅಕ್ರಮ ವಲಸಿಗರು, ವಿಶೇಷವಾಗಿ ಬಾಂಗ್ಲಾದೇಶದ ವಲಸಿಗರ ಸಂಖ್ಯೆ ಅತಿ ಹೆಚ್ಚು ಇದ್ದು, ಅವರನ್ನು ಗುರುತಿಸಿ ದೇಶ ಮತ್ತು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ದೇಶವನ್ನು ಬೆಚ್ಚಿಬೀಳಿಸಿದೆ. ಶಾಂತವಾಗಿದ್ದ ಕಾಶ್ಮೀರದಲ್ಲಿ ಮತ್ತೆ ರಕ್ತಪಾತ ನಡೆದಿದೆ. ಉಗ್ರರ ವಿರುದ್ಧ ಆಕ್ರೋಶ, ಭಯೋತ್ಪಾದನೆ ವಿರುದ್ಧದ ಸಮರವನ್ನು ಮತ್ತಷ್ಟು ತೀವ್ರಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು. ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 26 ಜನರು ಮೃತಪಟ್ಟಿರುವುದು ದೊಡ್ಡ ದುರಂತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಗ್ರಗಾಮಿಗಳ ಗುಂಡಿಗೆ ಬಲಿಯಾಗಿರುವ ಅಮಾಯಕರ ಕುಟುಂಬಕ್ಕೆ ರಾಜ್ಯ, ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಜತೆಗೆ ಅವರ ಕುಟುಂಬದ ಒಬ್ಬ ಸದಸದ್ಯರಿಗೆ ಸರ್ಕಾರಿ ನೌಕರಿ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಭಾರತಿ ಆಗಳೂರು, ಈರಮ್ಮ ವಾಲ್ಮೀಕಿ, ಮುತ್ತು, ರಾಜೇಶ್ವರಿ, ಪುಂಡಲಿಕ, ಬಾಷಾ ಸಂಗಾಪುರ, ಬಸವರಾಜ ನಾಯಕ, ವೆಂಕಟೇಶ ಭೋವಿ, ಕೃಷ್ಣ ಆಗಳೂರು, ಮಲ್ಲಿಕಾ ಹುಸೇನಪ್ಪ, ಭರಮಪ್ಪ, ಉಮೇಶ ಬಂಡಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!