ಕೋಟ್ಪಾ ಕಾಯ್ದೆಯಡಿ ದಾಳಿ: ₹1.23,270 ದಂಡ ವಸೂಲಿ

KannadaprabhaNewsNetwork |  
Published : Dec 04, 2024, 12:35 AM IST
3ಸಿಎಚ್‌ಎನ್‌51ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ)ಯಡಿ  ಕೋಟ್ಪಾ ತನಿಖಾ ತಂಡ ಅಂಗಡಿಯಲ್ಲಿ ಪರಿಶೀಲನೆ ನಡೆಸುತ್ತಿರುವುದು. | Kannada Prabha

ಸಾರಾಂಶ

ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಯಡಿ (ಕೋಟ್ಪಾ) ಏಪ್ರಿಲ್‌ನಿಂದ ನವೆಂಬರ್‌ವರೆಗೆ ಕೋಟ್ಪಾ ತನಿಖಾ ತಂಡದ ಸಹಯೋಗದೊಂದಿಗೆ ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ ನಡೆಸಿ ಒಟ್ಟು 1182 ಪ್ರಕರಣಗಳಲ್ಲಿ 1,23,270 ರು.ದಂಡ ವಿಧಿಸಲಾಗಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಯಡಿ (ಕೋಟ್ಪಾ) ಏಪ್ರಿಲ್‌ನಿಂದ ನವೆಂಬರ್‌ವರೆಗೆ ಕೋಟ್ಪಾ ತನಿಖಾ ತಂಡದ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ ನಡೆಸಿ ಒಟ್ಟು 1182 ಪ್ರಕರಣಗಳಲ್ಲಿ 1,23,270 ರು.ದಂಡ ವಿಧಿಸಲಾಗಿದೆ.

ಏಪ್ರಿಲ್‌ನಿಂದ ನವೆಂಬರ್ ಮಾಹೆವರೆಗೆ ಜಿಲ್ಲಾದ್ಯಂತ ತಾಲೂಕು ತನಿಖಾ ತಂಡದ ಸಹಯೋಗದೊಂದಿಗೆ ಒಟ್ಟು 41 ಕೋಟ್ಪಾ ಕಾನೂನು ಅನುಷ್ಠಾನ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಸೆಕ್ಷನ್ 4ರಡಿ 968 ಪ್ರಕರಣಗಳಲ್ಲಿ 103535 ರು. ದಂಡ, ಸೆಕ್ಷನ್ 6ಎ ಅಡಿ 141 ಪ್ರಕರಣಗಳಲ್ಲಿ 12,850 ರು. ದಂಡ, ಸೆಕ್ಷನ್ 6ಬಿ ಅಡಿ 73 ಪ್ರಕರಣಗಳಲ್ಲಿ 6885 ರು. ದಂಡ ಸೇರಿದಂತೆ ಒಟ್ಟಾರೆ 1,182 ಪ್ರಕರಣಗಳಿಗೆ 1,23,270 ರು. ದಂಡ ವಿಧಿಸಲಾಗಿದೆ.

ನಿಯಮ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳು, ಕೋಟ್ಪಾ ಸೆಕ್ಷನ್-4ಅಡಿ ಎಚ್ಚರಿಕೆ ನಾಮಫಲಕವನ್ನು ಪ್ರದರ್ಶಿಸದ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಟೀ ಸ್ಟಾಲ್, ಚಿಲ್ಲರೆ ಅಂಗಡಿಗಳು ಹಾಗೂ ಇತರೆ ಅಂಗಡಿಗಳು, ಕೋಟ್ಪಾ ಸೆಕ್ಷನ್-6(ಎ) ನಾಮಫಲಕವನ್ನು ಪ್ರದರ್ಶಿಸದ ತಂಬಾಕು ಮಾರಾಟವಿರುವ ಅಂಗಡಿಗಳು, ಶಿಕ್ಷಣ ಸಂಸ್ಥೆಯ 100 ಗಜಗಳ ಅಂತರದ ಒಳಗೆ ತಂಬಾಕು ಪದಾರ್ಥಗಳನ್ನು ಮಾರಾಟ ಮತ್ತು ಸೇವನೆಗೆ ಉತ್ತೇಜನ ನೀಡುವ ಅಂಗಡಿಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ಸ್ಥಳದಲ್ಲೇ ಕೋಟ್ಪಾ-2003ರಡಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ.

ಕರಪತ್ರ ವಿತರಿಸಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಸಾರ್ವಜನಿಕ ಸ್ಥಳದ ಮಾಲೀಕರು, ಮುಖ್ಯಸ್ಥರು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕಾರ್ಯಕ್ರಮಾಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ