ಪ್ರಧಾನಿಯ ವಿಕಸಿತ ಭಾರತ ಸಂಕಲ್ಪ ನನಸಿಗೆ ಯತ್ನ: ಚೌಟ

KannadaprabhaNewsNetwork |  
Published : Sep 18, 2024, 01:45 AM IST
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ರಕ್ತದಾನ ಮಾಡುತ್ತಿರುವುದು | Kannada Prabha

ಸಾರಾಂಶ

ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆಯಿತು. ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರದಾನಿ ನರೇಂದ್ರ ಮೋದಿಯವರು ಕಳೆದ10 ವರ್ಷದಿಂದ ಈ ದೇಶದ ಬಡವರ, ರೈತರ, ಮಹಿಳೆಯರ ಮತ್ತು ಯುವ ಸಮೂಹಕ್ಕಾಗಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ವಿಶ್ವದಲ್ಲಿ ಭಾರತವನ್ನುಆರ್ಥಿಕವಾಗಿ ಐದನೇ ದೊಡ್ಡ ದೇಶವನ್ನಾಗಿ ಮಾಡುವಲ್ಲಿ ಬಹಳ ಶ್ರಮವನ್ನು ವಹಿಸಿದ್ದಾರೆ. ಅವರ ಜನ್ಮದಿನದ ಈ ಶುಭ ಸಂದರ್ಭದಲ್ಲಿ ನಮ್ಮೆಲ್ಲ ಕಾರ್ಯಕರ್ತರು ನರೇಂದ್ರ ಮೋದಿಯವರಿಗೆ ಆರೋಗ್ಯ ಆಯಸ್ಸನ್ನು ನೀಡಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ. ವಿಕಸಿತ ಭಾರತದ ಸಂಕಲ್ಪದ ಕನಸನ್ನು ನನಸು ಮಾಡುವ ಕೆಲಸ ಎಲ್ಲರಿಂದ ಆಗಬೇಕು ಎಂದರು.

ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಗೆ 74 ಯೂನಿಟ್ ರಕ್ತ ಸಂಹ್ರಹಿಸಿ ನೀಡಲಾಗಿದೆ. ನರೇಂದ್ರ ಮೋದಿ ಅವರು ತಮ್ಮ ಜೀವನವನ್ನು ರಾಷ್ಟ್ರದ ಉನ್ನತಿಗಾಗಿ ಮುಡಿಪಾಗಿಟ್ಟಿದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಅವರ ಜನ್ಮ ದಿನವನ್ನು ಸಾಮಾಜಿಕ ಸೇವೆಯ ಮೂಲಕ ಆಚರಿಸಲು ರಕ್ತದಾನ ಹಮ್ಮಿಕೊಂಡಿದ್ದೇವೆ. ಜನರಿಗೆ ಅವಶ್ಯಕವಾದ ರಕ್ತದಾನದ ಮಹತ್ವವನ್ನು ತಿಳಿಸಿಕೊಡಲು ಇದು ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಯುವಮೋರ್ಚಾ ಮಂಡಲ ಅಧ್ಯಕ್ಷ ಮುರಳಿ ಕೊಣಾಜೆ, ಮುಖಂಡರಾದ ರಾಕೇಶ್‌, ನಿತೇಶ್ ಕಲ್ಲೇಗ, ಶಿಶಿರ್ ಪೆರುವಾಡಿ, ಅಶ್ವಿತ್ ಕೊಟ್ಟಾರಿ, ಕುಮಾರ್ ಪ್ರಸಾದ್, ಉಮೇಶ್ ಕುಲಾಲ್, ನಿಶಾನ್ ಪೂಜಾರಿ, ವರುಣ್ ಅಂಬಟ, ಅವಿನಾಶ್ ಸುವರ್ಣ, ನವೀನ್ ರಾಜ್, ಸಾಕ್ಷಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ನಾಯಕರು, ಮಂಡಲ‌ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...