ಅಭಿನಂದನಾ ಸಮಾರಂಭದಲ್ಲಿ ಸಂಸದ ಗೋವಿಂದ ಕಾರಜೋಳ ಭರವಸೆ
ನಗರದ ತನ್ಯಾಸಿ ಗೌಂಡರ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
55 ಸಾವಿರ ಎಕರೆ ಕೃಷಿ ಭೂಮಿಗೆ ನೀರು ಉಣಿಸುವ ಹಾಗೂ 359 ಕೆರೆಗಳಿಗೆ ನೀರು ತುಂಬಿಸುವ ಗುರಿ ನಮ್ಮ ಮುಂದಿದೆ. ಈ ಭಾಗದಲ್ಲಿ ಬಹುಸಂಖ್ಯಾತರಾಗಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಕ್ರಿಯೆ ಈಗಾಗಲೇ ಕೇಂದ್ರ ಸರ್ಕಾರದ ಮುಂದಿದೆ. ಮೀಸಲಾತಿಯನ್ನು ಕೊಡಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಯವರು ಎನ್ ಡಿಎ ನಾಯಕರೊಂದಿಗೆ ಮಾತುಕತೆ ನಡೆಸಿದ್ದು ಅವರ ಜೊತೆ ಕೈಜೋಡಿಸುತ್ತೇನೆ ಎಂದರು.ಬಿಜೆಪಿ–ಜೆಡಿಎಸ್ ಎರಡೂ ಪಕ್ಷಗಳ ಕಾರ್ಯಕರ್ತರು ಒಂದೇ ತಾಯಿ ಮಕ್ಕಳಂತೆ ನಡೆದುಕೊಳ್ಳಬೇಕು. ಶೀಘ್ರದಲ್ಲಿಯೇ ನಡೆಯಲಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಪಕ್ಷ ಹೆಚ್ಚಿನ ಸಾಧನೆ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮತ ನೀಡಿ ಆಶೀರ್ವದಿಸಿದ ಹಿರಿಯೂರು ಜನತೆಯ ಋಣ ತೀರಿಸುವ ಹೊಣೆಗಾರಿಕೆ ನನ್ನ ಮೇಲಿದೆ. ನರೇಂದ್ರ ಮೋದಿಯವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಬೇಕೆಂಬ ನಮ್ಮ ಗುರಿ ಈಡೇರಿದ್ದು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತೇವೆ ಎಂದರು.
ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪ ಮಾತನಾಡಿ, ಚುನಾವಣೆ ಪೂರ್ವದಲ್ಲಿ ಭರಮಗಿರಿ, ಕಲುವಳ್ಳಿ, ಕರಿಯಾಲ, ಜೆಜಿ ಹಳ್ಳಿ ಭಾಗದ ನೀರಿನ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದೇವೆ. ವಿವಿ ಸಾಗರ ಮತ್ತು ಗಾಯತ್ರಿ ಜಲಾಶಯಗಳಿಗೆ ಭದ್ರೆಯ ನೀರು ಹರಿಸುವ ಕಾಮಗಾರಿಗೆ ಕೇಂದ್ರದ ಅನುದಾನ ಕೊಡಿಸಬೇಕು. ಐಮಂಗಲ ಭಾಗದಲ್ಲಿ ಸ್ಥಗಿತಗೊಂಡಿರುವ ಭದ್ರಾ ಕಾಮಗಾರಿಯನ್ನು ಮತ್ತೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್.ತಿಮ್ಮಯ್ಯ ಸಂಸದರಿಗೆ ಮನವಿ ಸಲ್ಲಿಸಿ ವಾಣಿ ವಿಲಾಸ ಜಲಾಶಯಕ್ಕೆ ಭದ್ರಾ ಯೋಜನೆಯಲ್ಲಿ ಕೇವಲ 2 ಟಿಎಂಸಿ ಅಡಿ ನೀರು ನಿಗದಿಪಡಿಸಿದ್ದು ಜಲಾಶಯದ ಬೇಡಿಕೆ 7.50 ಟಿಎಂಸಿ ಅಡಿಯಾಗಿರುವುದರಿಂದ ಬೇಡಿಕೆಯಿರುವಷ್ಟು ನೀರು ನಿಗದಿಪಡಿಸಬೇಕೆಂದು ಒತ್ತಾಯಿಸಿದರು.