ಹೆರಾಯಿನ್ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

KannadaprabhaNewsNetwork |  
Published : Oct 19, 2026, 03:15 AM IST
ದುರ್ಗಾ ಪೂಜೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿನಗರದ ರಾಷ್ಟ್ರೀಯ ಹೆದ್ದಾರಿ ಸಮೀಪದ ಜೈ ಕಿಸಾನ್ ಬಾಜಿ ಮಾರ್ಕೆಟ್ ಗೇಟ್‌ ನಂ.1ರ ಬಳಿ ಹೆರಾಯಿನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ₹3 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ರಾಷ್ಟ್ರೀಯ ಹೆದ್ದಾರಿ ಸಮೀಪದ ಜೈ ಕಿಸಾನ್ ಬಾಜಿ ಮಾರ್ಕೆಟ್ ಗೇಟ್‌ ನಂ.1ರ ಬಳಿ ಹೆರಾಯಿನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ₹3 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

ಅಲಾರವಾಡದ ಅಂಬೇಡ್ಕರ್ ಗಲ್ಲಿಯ ಮಹಾಂತೇಶ ರಾಮಣ್ಣ ಅಂಬಿಗೇರ (37) ಯಳ್ಳೂರಿನ ಯರಮಾಳ ರಸ್ತೆಯ ಹರಿ ಕಾಲನಿ ನಿವಾಸಿ ಆಕಾಶ ಸುರೇಶ ನಂದಿ (28) ಬಂಧಿತರು. ಅ.17ರಂದು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಇನ್‌ಸ್ಪೆಕ್ಟರ್ ಮಂಜುನಾಥ ನಾಯಕ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿತರಿಂದ ₹ 2.90 ಲಕ್ಷ ಮೌಲ್ಯದ 14.49 ಗ್ರಾಂ ಹೆರಾಯಿನ್ ಪುಡಿ (124 ಸಣ್ಣ ಚೀಟಿಗಳಲ್ಲಿ) ಹಾಗೂ ₹10 ಸಾವಿರ ಮೌಲ್ಯದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆ ವೇಳೆ ಮಹಾರಾಷ್ಟ್ರದ ಅಮ್ಮ ಎಂಬಾಕೆಯಿಂದ ಹೆರಾಯಿನ್ ತಂದಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 3ನೇ ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತರ ಕಚೇರಿಯ ಪ್ರಕಟಣೆ ತಿಳಿಸಿದೆ.

ದಾಳಿ ನಡೆಸಿದ ಸಿಸಿಬಿ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಶ್ಲಾಘಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮದ ಬೆಳಕಿನಿಂದ ನಮ್ಮ ಬದುಕು ಪಾವನ: ರಂಭಾಪುರಿ ಜಗದ್ಗುರು
ಕಬ್ಬು ಬೆಳೆಗಾರರ ಹೋರಾಟಕ್ಕೆ ಜನಬೆಂಬಲದ ಮಹಾಪೂರ