ಬಿಜೆಪಿ ಕಚೇರಿ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

KannadaprabhaNewsNetwork |  
Published : Dec 19, 2025, 01:30 AM IST
ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ತಡೆದರು. | Kannada Prabha

ಸಾರಾಂಶ

ಚಿಕ್ಕಮಗಳೂರುನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂಧಿ ವಿರುದ್ಧ ಬಿಜೆಪಿ ನಾಯಕರು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

- ಬಿಜೆಪಿ ಕಚೇರಿಗೆ ಮುತ್ತಿಗೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂಧಿ ವಿರುದ್ಧ ಬಿಜೆಪಿ ನಾಯಕರು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಘಟಕದಿಂದ ಗುರುವಾರ ಬಿಜೆಪಿ ಕಚೇರಿಗೆ ಮುತ್ತಿಗೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಆರಂಭವಾಯಿತು. ಹಲವಾರು ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಮಾರ್ಗ ಮಧ್ಯದಲ್ಲೇ ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ ಕಚೇರಿಯತ್ತ ತೆರಳದಂತೆ ಕಟ್ಟೆಚ್ಚರ ವಹಿಸಿದ್ದರು. ಈ ಮಧ್ಯೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು. ಅಂತಿಮ ವಾಗಿ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ಕಚೇರಿಗೆ ಮುತ್ತಿಗೆ ಹಾಕುತ್ತಾರೆ ಎಂಬುದನ್ನು ಅರಿತಿದ್ದ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟದೊಂದಿಗೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿರೋಧ ವ್ಯಕ್ತಪಡಿಸಿ ನಂತರ ಹಿಂದಿರುಗಿದರು.ಬಿಜೆಪಿ ಕಚೇರಿ ಮುತ್ತಿಗೆಗೂ ಮುನ್ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಕಳೆದ 12 ವರ್ಷದಲ್ಲಿ ದಬ್ಬಾಳಿಕೆ ರಾಜಕಾರಣ ನಡೆಸುತ್ತಿದೆ. ಇಡಿ, ಸಿಬಿಐ ನಂತಹ ಸ್ವಾಯುತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಕೊಂಡು ವಿರೋಧ ಪಕ್ಷದ ದನಿ ಕುಗ್ಗಿಸುವ ಕೆಲಸಕ್ಕೆ ಮುಂದಾಗಿರುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ವಿರುದ್ಧ ಹಾಕಿದ್ದ ಕೇಸನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಬಿಜೆಪಿಗೆ ಛೀಮಾರಿ ಹಾಕಿದೆ ಎಂದು ಹೇಳಿದರು.ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ ಬಿಜೆಪಿಯಿಂದ ನಡೆಯುತ್ತಿದೆ. ಕಾಂಗ್ರೆಸ್ ವಿರುದ್ಧ ಆಧಾರವಿಲ್ಲದ ಆರೋಪವನ್ನು 2014 ರಿಂದೀಚೆಗೆ ಬಿಜೆಪಿ ಮಾಡುತ್ತಿದೆ. ಸ್ವಾತಂತ್ರ್ಯ ಚಳವಳಿ ಗಟ್ಟಿಗೊಳಿಸಲು 1919 ರಲ್ಲಿ ಯಂಗ್ ಇಂಡಿಯಾ ಸಂಸ್ಥೆಯನ್ನು ಗಾಂಧೀಜಿ ಹುಟ್ಟು ಹಾಕಿದರು ಎಂದು ಹೇಳಿದರು.1938ರಲ್ಲಿ ಎಜಿಎಲ್ ಸಂಸ್ಥೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಉದಯವಾಯಿತು. ಈ ಪತ್ರಿಕೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಬ್ರಿಟೀಷರ ಗುಲಾಮರಾಗಿದ್ದ ಅಂದಿನ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಆರ್ಗನೈಸರ್ ಪತ್ರಿಕೆಯಲ್ಲಿ ಏನೆಲ್ಲ ಬರೆದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಡಾ. ಡಿ.ಎಲ್. ವಿಜಯ್‌ಕುಮಾರ್, ರೇಖಾ ಹುಲಿಯಪ್ಪಗೌಡ, ಸಿಡಿಎ ಅಧ್ಯಕ್ಷ ನಯಾಜ್ ಅಹ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಮಲ್ಲೇಶ್‌, ಎನ್.ಡಿ. ಚಂದ್ರಪ್ಪ, ಎಂ.ಸಿ ಶಿವಾನಂದಸ್ವಾಮಿ, ಹುಣಸೇಮಕ್ಕಿ ಲಕ್ಷ್ಮಣ್‌, ಪ್ರಕಾಶ್ ರೈ, ನಗರಸಭೆ ಸದಸ್ಯರಾದ ಲಕ್ಷ್ಮಣ್‌, ಶಾದಬ್ ಅಲಂಖಾನ್, ಪ್ರಸಾದ್ ಅಮೀನ್, ನಗರಾಧ್ಯಕ್ಷ ತನೂಜ್ ನಾಯ್ಡು, ಕೆ.ಭರತ್ ಪಾಲ್ಗೊಂಡಿದ್ದರು.

18 ಕೆಸಿಕೆಎಂ 2ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ತಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು