ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡೀಸಿ ಕಚೇರಿಗೆ ಮುತ್ತಿಗೆ ಯತ್ನ

KannadaprabhaNewsNetwork |  
Published : Oct 24, 2025, 01:00 AM IST
4.ರಾಮನಗರದಲ್ಲಿ ಜಿಲ್ಲಾಡಳಿತದ ವಿರುದ್ಧ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು. | Kannada Prabha

ಸಾರಾಂಶ

ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಸಂಘ ಹಾಗೂ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಗುರುವಾರ ಬಂಧಿಸಿ ಬಿಡುಗಡೆ ಮಾಡಿದರು.

ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಸಂಘ ಹಾಗೂ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಗುರುವಾರ ಬಂಧಿಸಿ ಬಿಡುಗಡೆ ಮಾಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಳೇಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಜಮಾಯಿಸಿದ ನೂರಾರು ರೈತರು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳಿಗೆ ನಮ್ಮ ಅಹವಾಲನ್ನು ಕೇಳುವ ಸೌಜ್ಯನವು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಮನವಿ ಪತ್ರವನ್ನು ಸ್ವೀಕರಿಸಲು ಜಿಲ್ಲಾಧಿಕಾರಿಯೇ ಬರಬೇಕು ಎಂದು ಪ್ರತಿಭಟನಾಕಾರರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿಯೇ ಕುಳಿತು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಬರದಿದ್ದಾಗ ಆಕ್ರೋಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಆವರಣ ಪ್ರವೇಶಕ್ಕೆ ಪ್ರಯತ್ನಿಸಿದಾಗ ಪೊಲೀಸರು ನಿರಾಕರಿಸಿದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಪ್ರತಿಭಟನಾಕಾರರು ಹೋರಾಟ ಮುಂದುವರಿಸಿದರು. ಅಂತಿಮವಾಗಿ ಜಿಲ್ಲಾಡಳಿತ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ವೇಳೆ ಹೋರಾಟಗಾರರನ್ನು ಪೊಲೀಸರು ಬಂಧಸಿ ನಂತರ ಬಿಡುಗಡೆ ಮಾಡಿದರು.

ಹಾರೋಹಳ್ಳಿ ತಾಲೂಕು ಗಂಡಕನದೊಡ್ಡಿಯ ರಸ್ತೆ ತೆರವು ಮಾಡದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ತಹಸೀಲ್ದಾರ್‌ ರವರು ರಸ್ತೆ ತೆರವು ಮಾಡಲು ವಿಫಲರಾಗಿದ್ದಾರೆ. 10 - 15 ಕುಟುಂಬಗಳು ತಮ್ಮ ತಮ್ಮ ಮನೆಗಳು ಓಡಾಡುವ ನಕಾಶೆ ರಸ್ತೆಯನ್ನು ಶಾಸಕರ ಬೆಂಬಲಿಗ ಒತ್ತುವರಿ ಮಾಡಿಕೊಂಡಿದ್ದಾರೆ. ಇ ಖಾತೆ ಮಾಡಿಸಿಕೊಂಡು ಮಾರಾಟ ಮಾಡುತ್ತಿದ್ದಾರೆ. ಇದನ್ನು ತಡೆಯಲು ಕಂದಾಯ ಇಲಾಖೆ ವಿಫಲವಾಗಿದೆ. ಜಿಲ್ಲಾಡಳಿತ ನೊಂದವರಿಗೆ ನ್ಯಾಯ ಕೊಡುತ್ತಿಲ್ಲ. ಉಳ್ಳವರ ಪರ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಬೇಕು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು. ಹಾಲಿಗೆ ವೈಜ್ಞಾನಿಕ ದರವನ್ನು ನಿಗದಿ ಮಾಡಬೇಕು. ಹೊರ ದೇಶದಿಂದ ಹಾಲು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಹಾವು ಕಡಿತಕ್ಕೆ ಒಳಗಾದಾಗ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ತಪ್ಪದೆ ಲಸಿಕೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹೊಂಗಾಣಿ ದೊಡ್ಡಿ ಗ್ರಾಮವನ್ನು ರಾಮನಗರದ ಶಾಸಕರು ಕಬಳಿಸಿದ್ದಾರೆ. ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಗಳ್ನು ಬಳಸಿಕೊಂಡು ಗ್ರಾಮವನ್ನೇ ಒಕ್ಕಲೆಬ್ಬಿಸಲಾಗುತ್ತಿದೆ. ಗ್ರಾಮಸ್ಥರಿಗೆ ಸೂಕ್ತ ರಕ್ಷಣೆ ನೀಡಬೇಕು. ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಕೂಡಲೇ ಇತ್ಯರ್ಥ ಪಡಿಸಬೇಕು ಎಂದ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಯ್ಯ, ಮನಿರಾಜು, ರಮ್ಯ ರಾಮಣ್ಣ, ಕೃಷ್ಣಯ್ಯ, ಚಂದ್ರಶೇಖರ್, ತಿಮ್ಮೇಗೌಡ, ರವಿಕುಮಾರ್, ಪುಟ್ಟಸೌಮಿ, ಜಯಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

(ಎರಡೂ ಫೋಟೊ ಬಳಸಿ)

23ಕೆಆರ್ ಎಂಎನ್ 4,5.ಜೆಪಿಜಿ

4.ರಾಮನಗರದಲ್ಲಿ ಜಿಲ್ಲಾಡಳಿತದ ವಿರುದ್ಧ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.

5.ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಹೋರಾಟಗಾರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ವಕೀಲರಿಗೆ ಮಾಹಿತಿ ನೀಡದಿದ್ರೆ ಕ್ರಮ : ಹೈ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌