ರಾಹುಲ್ ಗಾಂಧಿ ಮೇಲೆ ದಾಳಿ ಯತ್ನ: ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Jan 24, 2024, 02:02 AM IST
 | Kannada Prabha

ಸಾರಾಂಶ

ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿದ ಬಿಜೆಪಿ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದಲ್ಲದೇ ಗೂಂಡಾಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿದ ಬಿಜೆಪಿ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದಲ್ಲದೇ ಗೂಂಡಾಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಎಂ. ರಸ್ತೆ ಮೂಲಕ ಡಿಸಿ ಕಚೇರಿ ಎದುರು ರಸ್ತೆ ಮಧ್ಯೆ ಕುಳಿತು ಕೆಲ ಸಮಯ ರಸ್ತೆ ತಡೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಅವರು, ಪಕ್ಷದ ಮುಖಂಡರಾದ ಮುನಿಸ್ವಾಮಿ ಮತ್ತು ಶಶಿಧರ್ ಮಾಧ್ಯಮದೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಯು ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ಸನ್ನು ಬಿಜೆಪಿ ಕಾರ್ಯಕರ್ತರು ಅಡ್ಡಗಟ್ಟಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿದರು. ರಾಹುಲ್ ಗಾಂಧಿ ಅವರ ಮೇಲಿನ ದಾಳಿಯು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದ್ದು, ದಾಳಿ ನಡೆಸಿದ ಬಿಜೆಪಿ ಗೂಂಡಾಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ತಕ್ಷಣ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಘು ದಾಸರಕೊಪ್ಪಲು, ಮಂಜುನಾಥ್ ಶರ್ಮ ರಂಜಿತ್ ಗೊರೂರು, ಅಬ್ದುಲ್ ಖಯೂಂ, ಅಮ್ಜದ್, ಪ್ರವೀಣ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ