ಎಟಿಎಂನಲ್ಲಿ ಕಳವು ಯತ್ನ: 4 ಲಕ್ಷ ಹಣ ಬೆಂಕಿಗಾಹುತಿ

KannadaprabhaNewsNetwork |  
Published : Dec 08, 2023, 01:45 AM IST
ಪೋಟೊ 6 : ಅರಿಶಿನಕುಂಟೆ ಬಳಿಯ ಎಟಿಎಂ ಕಳ್ಳತನಕ್ಕೆ ಯತ್ನಿಸಿರುವುದು. | Kannada Prabha

ಸಾರಾಂಶ

ದಾಬಸ್‌ಪೇಟೆ/ನೆಲಮಂಗಲ: ಗ್ಯಾಸ್ ಕಟರ್ ಬಳಸಿ ಇಬ್ಬರು ದುಷ್ಕರ್ಮಿಗಳು ಎಟಿಎಂನಲ್ಲಿ ಹಣ ಅಪಹರಿಸಲು ಯತ್ನಿಸಿದ್ದು ಸಿಬ್ಬಂದಿಯ ಅಲರ್ಟ್ ಕರೆಯಿಂದ ಓಡಿ ಹೋಗಿದ್ದು, ಸುಮಾರು ಎಂಟಿಎಂನಲ್ಲಿದ್ದ ನಾಲ್ಕೂವರೆ ಲಕ್ಷ ಹಣ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.

ದಾಬಸ್‌ಪೇಟೆ/ನೆಲಮಂಗಲ: ಗ್ಯಾಸ್ ಕಟರ್ ಬಳಸಿ ಇಬ್ಬರು ದುಷ್ಕರ್ಮಿಗಳು ಎಟಿಎಂನಲ್ಲಿ ಹಣ ಅಪಹರಿಸಲು ಯತ್ನಿಸಿದ್ದು ಸಿಬ್ಬಂದಿಯ ಅಲರ್ಟ್ ಕರೆಯಿಂದ ಓಡಿ ಹೋಗಿದ್ದು, ಸುಮಾರು ಎಂಟಿಎಂನಲ್ಲಿದ್ದ ನಾಲ್ಕೂವರೆ ಲಕ್ಷ ಹಣ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.

ಡಿ.7ರಂದು ಗುರುವಾರ ಬೆಳಗಿನ ಜಾವ 1.50ರ ವೇಳೆಯಲ್ಲಿ ಅರಿಶಿನಕುಂಟೆ ಗ್ರಾಮದ ಖಾಸಗಿ ಬ್ಯಾಂಕ್ ಎಟಿಎಂಗೆ ನುಗ್ಗಿರುವ ಇಬ್ಬರು ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಗ್ಯಾಸ್ ಕಟರ್‌ನಲ್ಲಿ ಎಟಿಎಂ ಯಂತ್ರವನ್ನು ಕತ್ತರಿಸುತ್ತಿದ್ದ ವೇಳೆ ಮುಂಬೈನ ಬ್ಯಾಂಕ್ ಕಚೇರಿಗೆ ಸಂದೇಶ ತಲುಪಿದೆ. ಬಳಿಕ ಬ್ಯಾಂಕ್ ಸಿಬ್ಬಂದಿ ಸ್ಥಳೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ತಕ್ಷಣ ಬ್ಯಾಂಕ್ ವ್ಯವಸ್ಥಾಪಕ 1.55 ಗಂಟೆಗೆ ಕಟ್ಟಡ ಮಾಲೀಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಬ್ಯಾಂಕ್ ಕಟ್ಟಡದ ಮಾಲೀಕ ಸ್ಥಳಕ್ಕೆ ಬರುತ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗ್ಯಾಸ್ ಕಟರ್‌ನಿಂದ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ 4.60 ಲಕ್ಷ ರು. ಹಣ ಸುಟ್ಟಿದ್ದು ಉಳಿದ ಹಣವನ್ನು ಬ್ಯಾಂಕ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಂಟಿಎಂ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಕಳ್ಳರ ಓಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದಿರುವ ನೆಲಮಂಗಲ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಟೊ 6 : ಅರಿಶಿನಕುಂಟೆ ಬಳಿಯ ಎಟಿಎಂ ಕಳ್ಳತನಕ್ಕೆ ಯತ್ನಿಸಿರುವುದು.

ಪೋಟೋ 7 : ಎಟಿಎಂ ನಲ್ಲಿ ಸುಟ್ಟಿರುವ ನೋಟುಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ