2ನೇ ಪುಟಕ್ಕೆ..ಕಟ್‌ ಲೀಡ್‌..ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ

KannadaprabhaNewsNetwork |  
Published : Apr 07, 2026, 03:15 AM IST
ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಜಿಲ್ಲಾಧಿಕಾರಿ ಖಡಕ್ ಸೂಚನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಕೃಷಿ ಇಲಾಖೆ ಜಂಟಿನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ ಅಧಿಕಾರಿಗಳ ಹಾಗೂ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏ.1ರಿಂದ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗುತ್ತಿದ್ದಂತೆಯೇ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು. ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ದೈನಂದಿನ ಕಚೇರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಕೃಷಿ ಇಲಾಖೆ ಜಂಟಿನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ ಅಧಿಕಾರಿಗಳ ಹಾಗೂ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.

2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏ.1ರಿಂದ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗುತ್ತಿದ್ದಂತೆಯೇ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು. ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ದೈನಂದಿನ ಕಚೇರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.ಯಾವುದೇ ಸಿಬ್ಬಂದಿ ಯಾವುದೇ ಕಡತ: ಬಾಕಿ ಉಳಿಸಿಕೊಳ್ಳದೇ ಕಾರ್ಯ ನಿರ್ವಹಿಸುವ ಮೂಲಕ ಕಡತಗಳನ್ನು ವಿಲೇವಾರಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.ಸಾರ್ವಜನಿಕರಿಗೆ ಸ್ಪಂದಿಸಿ: ತಮ್ಮ ಎಂದಿನ ಕೆಲಸ ಕಾರ್ಯಗಳಿಗೆ ಆಯಾ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸ್ಪಂದನೆ ನೀಡಬೇಕು. ಅವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಬೇಕು. ಯಾವುದೇ ಲೋಪ-ದೋಷ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಿಗದಿತ ಸಮಯಕ್ಕೆ ಕಚೇರಿಯಲ್ಲಿರಬೇಕು:

ಇದೇ ವೇಳೆ ಕಚೇರಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ವ್ಯವಸ್ಥೆ ಇರಬೇಕು. ಜತೆಗೆ ಕಚೇರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಿರಬೇಕಾದುದು ಕಡ್ಡಾಯ. ಯಾವುದೇ ಕಚೇರಿಗೆ ಹಠಾತ್ ಭೇಟಿ ನೀಡಲಾಗುವುದು. ಕಚೇರಿಯ ವೇಳೆಯಲ್ಲಿ ಕಚೇರಿಯಲ್ಲಿದ್ದು ಕಡತಗಳನ್ನು ತಕ್ಷಣಕ್ಕೆ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೂ ಸೂಚಿಸಿದರು.ಇಡೀ ಜಿಲ್ಲೆಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸಿಬ್ಬಂದಿ ಬದಲಾದ ಸಮಯದಲ್ಲಿ ಕಚೇರಿಯಲ್ಲಿದ್ದುಕೊಂಡು ಯಾವುದೇ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು. ಸರಕಾರಿ ಕಚೇರಿ ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶನ ನೀಡಿದರೆ ಸಮಯದ ಮಿತಿಯಿಲ್ಲದೇ ಕೆಲಸ ನಿರ್ವಹಿಸಬೇಕೆಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.

-----------

6bij03

ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುದ್ಧದಿಂದ ವಿಶ್ವದ ಮೇಲೆ ನಕಾರಾತ್ಮಕ ಪರಿಣಾಮ
ಭೂಮಾಪಕರ ಬೇಡಿಕೆ ಈಡೇರಿಸಲು ಆಗ್ರಹ