ಕನ್ನಡಪ್ರಭ ವಾರ್ತೆ ಅಥಣಿರಾಷ್ಟ್ರೀಯ ಹಬ್ಬ ಎಂದರೇ ರಜಾ ದಿನವಲ್ಲ, ಜ.26 ರಂದು ಜರಗುವ ಗಣರಾಜ್ಯೋತ್ಸವದಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ತಾಲೂಕು ತಹಸೀಲ್ದಾರ್ ವಾಣಿ.ಯು ಮಾತನಾಡಿ ಭೋಜರಾಜ ಕ್ರೀಡಾಂಗಣದಲ್ಲಿ ಜರುಗುವ ಸಾರ್ವಜನಿಕ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುವುದು. ಪೊಲೀಸ್ ಇಲಾಖೆ, ಎನ್‌ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸೇರಿದಂತೆ ವಿವಿಧ ಶಾಲೆಯ ಮಕ್ಕಳು ಪೆರೇಡ್ ನಲ್ಲಿ ಭಾಗವಹಿಸುವರು. ಅದಕ್ಕಾಗಿ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆಯ ಸಿದ್ಧತೆ, ಆಸನ ಮತ್ತು ಪೆಂಡಾಲ್ ವ್ಯವಸ್ಥೆ, ಧ್ವನಿವರ್ಧಕ, ಕುಡಿಯುವ ನೀರು ಮತ್ತು ಉಪಹಾರದ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಮತ್ತು ಮೆರವಣಿಗೆ ಸಾಗುವ ದಾರಿಯುವುದಕ್ಕೂ ಸ್ವಚ್ಛತೆ ಕೈಗೊಳ್ಳಬೇಕು. ಅಂಗಡಿಕಾರರು ಮುಂಚಿತವಾಗಿ ಅಂಗಡಿಗಳನ್ನು ತೆರೆದು ರಂಗೋಲಿ ಬಿಡಿಸಿ ಅಲಂಕಾರಗೊಳಿಸುವಂತೆ ಸಲಹೆ ನೀಡಬೇಕು. ಪಟ್ಟಣದಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಕಂಡು ಬಂದರೆ ಅವುಗಳನ್ನ ವಶಪಡಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ಪುರಸಭೆ ಮುಖ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪಥಸಂಚಲನ ಜವಾಬ್ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ವಹಿಸಿಕೊಂಡು ಅವುಗಳನ್ನು ಮುಂಚಿತವಾಗಿ ಪರಿಶೀಲನೆ ಮಾಡಬೇಕು. ರಾಷ್ಟ್ರಗೀತೆ ಮತ್ತು ನಾಡಗೀತೆಗಳನ್ನು ಪ್ರಸ್ತುತಪಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೂ ಆದ್ಯತೆ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಉಪತಹಸೀಲ್ದಾರ್ ಮಹದೇವ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿ, ಅಭಿಯಂತರ್ ವೀರಣ್ಣ ವಾಲಿ, ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ, ಪಿಎಸೈ ಶಿವಾನಂದ ಕಾರಜೋಳ, ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಅಶೋಕ ಕಾಂಬಳೆ, ನೀರಾವರಿ ಇಲಾಖೆ ಅಧಿಕಾರಿ ಶ್ರೀಕಾಂತ ಮಾಕಾಣಿ, ಪುರಸಭೆ ಮುಖ್ಯ ಅಧಿಕಾರಿ ಅಶೋಕ ಗುಡಿಮನಿ, ಪ್ರವೀಣ ಹುಣಸಿಕಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಕ್ಯಾಲೆಂಡರ್ ಬಿಡುಗಡೆ: