ರಾಮನಗರ: ಜಿಲ್ಲಾ ಕೇಂದ್ರವಾದರು ಇದುವರೆಗೆ ಕನ್ನಡ ಭವನ ನಿರ್ಮಾಣದ ಬೇಡಿಕೆ ಈಡೇರಿಲ್ಲ. ಈ ಬಗ್ಗೆ ಸಾಹಿತಿಗಳು, ಕಲಾವಿದರು, ಕನ್ನಡ ಮನಸ್ಸುಗಳು ಚುನಾಯಿತ ಪ್ರತಿನಿಧಿಗಳ ಗಮನ ಸೆಳೆಯುವ ಕೆಲಸ ಮಾಡೋಣ ಎಂದು ಸಾಹಿತಿ ಪ್ರೊ.ಎಂ.ಶಿವನಂಜಯ್ಯ ಹೇಳಿದರು.
ನಗರದ ಐಜೂರು ವೃತ್ತದಲ್ಲಿ ಸ್ನೇಹಕೂಟ ಟ್ರಸ್ಟ್ ಹಾಗೂ ತಾಲೂಕು ಕಸಾಪ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಭವನ ನಿರ್ಮಾಣಕ್ಕೆ ವೈಯಕ್ತಿಕವಾಗಿ 1 ಲಕ್ಷ ರು.ದೇಣಿಗೆ ನೀಡುತ್ತೇನೆ. ಕರ್ನಾಟಕದಲ್ಲಿ ಜನಿಸಿದ ಪ್ರತಿಯೊಬ್ಬರಿಗೂ ಕನ್ನಡದ ಬಗೆಗೆ ಪ್ರೀತಿ ಜೊತೆಗೆ ಹೆಚ್ಚು ಅಭಿಮಾನ ಇರಬೇಕಾಗುತ್ತದೆ. ನಮ್ಮ ನಾಡು, ನುಡಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಿ ಎಂದು ಮನವಿ ಮಾಡಿದರು.ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾತನಾಡಿ, ಕನ್ನಡಿಗರಾದ ನಾವು ಕನ್ನಡ ಭಾಷೆ ಮೇಲಿನ ಅಭಿಮಾನವನ್ನು ಕೇವಲ ನವೆಂಬರ್ ತಿಂಗಳಿಗಷ್ಟೇ ಸೀಮಿತ ಮಾಡಿಕೊಳ್ಳದೆ ವರ್ಷದ ಎಲ್ಲ ದಿನಗಳಲ್ಲಿಯೂ ಭಾಷೆಯ ಬಗ್ಗೆ ಪ್ರೀತಿ ಇರಬೇಕಾಗುತ್ತದೆ. ಸ್ನೇಹಕೂಟ ಸ್ಟ್ ಕಳೆದ 16 ವರ್ಷಗಳಿಂದ ಕನ್ನಡದ ಮನಸ್ಸುಗಳನ್ನು ಕಟ್ಟಿಕೊಂಡು ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಾಹಿತ ಡಾ.ಎಂ.ಬೈರೇಗೌಡ, ಸ್ನೇಹಕೂಟ ಟ್ರಸ್ಟ್ ಅಧ್ಯಕ್ಷ ಎಚ್.ಪಿ.ನಂಜೇಗೌಡ, ಕಲಾವಿದರ ಒಕ್ಕೂಟದ ಅಧ್ಯಕ್ಷ ಬೈರೇಗೌಡ, ಕಸಾಪ ಅಧ್ಯಕ್ಷ ಬಿ.ಟಿ.ದಿನೇಶ್ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ತಿಮ್ಮೇಗೌಡ, ವಕೀಲ ರವಿ, ಪ್ರಾಂಶುಪಾಲರ ಸಂಘದ ಮಾಜಿ ಅಧ್ಯಕ್ಷ ಎಲ್.ಎನ್.ವನರಾಜು ಉಪಸ್ಥಿತರಿದ್ದರು.1ಕೆಆರ್ ಎಂಎನ್ 6.ಜೆಪಿಜಿ
ರಾಮನಗರದ ಐಜೂರು ವೃತ್ತದಲ್ಲಿ ಸ್ನೇಹಕೂಟ ಟ್ರಸ್ಟ್ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.