ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಕೈಗಾರಿಕೆಗಳ ಸ್ಥಾಪನೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ, ಗ್ರಾಮೀಣ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.ಬುಧವಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅವರು ಗುರುವಾರ ಪತ್ರಕರ್ತರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಪತ್ರಕರ್ತರು ಅವರ ಗಮನಕ್ಕೆ ತಂದ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ‍್ಳುವ ಭರವಸೆ ನೀಡಿದರು. ಜಿಲ್ಲೆಯ ಮಳೆಗಾಲದ ಸಮಸ್ಯೆ, ಮಲ್ಪೆ ಬಂದರಿನ ಸಮಸ್ಯೆ, ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರೊಂದಿಗೆ ಕೇಳಿ ತಿಳಿದುಕೊಂಡಿದ್ದೇನೆ. ಮರಳಿನ ಸಮಸ್ಯೆ, ಕೃಷಿ ಕ್ಷೇತ್ರದ ಸಮಸ್ಯೆ, ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಡತಗಳ ಬಾಕಿ ಸಮಸ್ಯೆಗಳನ್ನು ಪತ್ರಕರ್ತರು ಗಮನ ಸಳೆದಾಗ, ಅವುಗಳನ್ನು ಆದ್ಯತೆಯಲ್ಲಿ ಪರಿಶೀಲಿಸುವುದಾಗಿ ಹೇಳಿದರು.ಟೆಕ್ಸ್‌ಟೈಲ್ ಎಂಜಿನಿಯರ್: