ಕನ್ನಡಪ್ರಭ ವಾರ್ತೆ ಔರಾದ್
ಈ ಕುರಿತು ಪ್ರಕಟಣೆ ನೀಡಿದ ಅವರು, ಔರಾದ್ (ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಅತ್ಯಂತ ಗಂಭೀರ ಬರ ಪರಿಸ್ಥಿತಿ ಇದ್ದರೂ ಆರಂಭದಲ್ಲಿ ಎರಡೂ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಹೊರಗಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜುಲೈ 14ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದಿದ್ದೆ ಎಂದು ಹೇಳಿದ್ದಾರೆ.
ನಿರಂತರ ಪ್ರಯತ್ನದ ಫಲವಾಗಿ ಕಮಲನಗರ ತಾಲ್ಲೂಕನ್ನು ಈ ಹಿಂದೆ ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಲಾಗಿತ್ತು. ಆದರೆ ಔರಾದ್ (ಬಿ) ತಾಲ್ಲೂಕಿನಲ್ಲಿ ಇನ್ನಷ್ಟು ಗಂಭೀರ ಪರಿಸ್ಥಿತಿ ಇದ್ದರೂ ಸೇರ್ಪಡೆ ಮಾಡದ ಹಿನ್ನೆಲೆಯಲ್ಲಿ ಸಂಬಂಧಿಸಿದ ಮೇಲಾಧಿಕಾರಿಗಳನ್ನು ಮಾತನಾಡಿ, ವಾಸ್ತವ ಅಂಶಗಳನ್ನು ಗಮನಕ್ಕೆ ತಂದಿದ್ದೆ. ವಿಧಾನಸಭಾ ಅಧಿವೇಶನದಲ್ಲಿಯೂ ಈ ಕುರಿತು ಧ್ವನಿ ಎತ್ತಿದ್ದೆ. ಔರಾದ್‌ನಲ್ಲಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯ ಲಾಗಿತ್ತು. ಅಲ್ಲದೇ ಸೆ.23ರಂದು ಖುದ್ದಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ರೈತರ ಸಂಕಷ್ಟದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೆ. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ನಿರ್ದೇಶನ ನೀಡಿದ್ದರು ಎಂದು ತಿಳಿಸಿದ್ದಾರೆ.ಇದೀಗ ಔರಾದ್ (ಬಿ) ತಾಲ್ಲೂಕನ್ನೂ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆ ಮಾಡಿರುವುದರಿಂದ ಕ್ಷೇತ್ರದ ಔರಾದ್ (ಬಿ) ಮತ್ತು ಕಮಲನಗರ ಎರಡೂ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾದಂತಾಗಿದೆ. ರೈತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ರೈತರ ಪರವಾಗಿ ನಡೆಸಿದ ನಿರಂತರ ಹೋರಾಟ, ಮನವಿ ಹಾಗೂ ಒತ್ತಡಕ್ಕೆ ಸರ್ಕಾರ ಸ್ಪಂದಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.