ಘಾಟಿಯಲ್ಲಿ ಮಾಂಗಲ್ಯ ಭಾಗ್ಯ: ದಾಂಪತ್ಯಕ್ಕೆ ಕಾಲಿಟ್ಟ 66 ನವಜೋಡಿ

KannadaprabhaNewsNetwork |  
Published : May 08, 2025, 12:36 AM IST
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ನಡೆದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಸಚಿವ ಕೆ.ಎಚ್.ಮುನಿಯಪ್ಪ ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗಳಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬುಧವಾರ 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಘಾಟಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 66 ನೂತನ ಜೋಡಿಗಳು ಸತಿ-ಪತಿಗಳಾದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಉಪಸ್ಥಿತರಿದ್ದು, ವಧು-ವರರಿಗೆ ಆಶೀರ್ವದಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆ.ಎಚ್.ಮುನಿಯಪ್ಪ, ಶುಭ ಲಗ್ನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ. ಸಾಲ ಮಾಡಿ ಲಕ್ಷಾಂತರ ರುಪಾಯಿಗಳನ್ನು ಖರ್ಚು ಮಾಡಿ ಆಗುವ ಮದುವೆಗಳಿಂದ, ಮುಂದೆ ಸಾಲ ತೀರಿಸಲಾಗದ

ಪರಿಸ್ಥಿತಿ ನಿರ್ಮಾಣ ಆಗಬಹುದು. ಸರಳ ವಿವಾಹ ಆಗುವುದರಿಂದ ನೆಮ್ಮದಿಯ ಜೀವನ ನಡೆಸಬಹುದು. ದೇವರ ಸನ್ನಿದಾನದಲ್ಲಿ ನೆರವೇರಿರುವ ಈ ಸಾಮೂಹಿಕ ವಿವಾಹ ಶ್ರೇಷ್ಠವಾಗಿದೆ. ತಮಗೆ ಉತ್ತಮ ಜೀವನ, ಆರೋಗ್ಯ ಭಾಗ್ಯ,ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ತಿಳಿಸಿದರು.

ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗಳಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಎ.ಬಿ

ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಸೀಲ್ದಾರ್ ವಿಭಾ ರಾಥೋಡ್, ಇಒ

ಮುನಿರಾಜು, ಪ್ರಾಧಿಕಾರದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
₹70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ: ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!