ಗಣೇಶೋತ್ಸವಕ್ಕೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮವಹಿಸಿ

KannadaprabhaNewsNetwork |  
Published : Aug 27, 2025, 01:01 AM IST
ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು. | Kannada Prabha

ಸಾರಾಂಶ

ಗಣೇಶ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. 11 ದಿನಗಳ ಕಾಲ ಉತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು. ಗಣೇಶ ಮೆರವಣಿಗೆ ನಡೆಯುವ ಮಾರ್ಗಗಳಲ್ಲಿ ಗುಂಡಿಗಳನ್ನು ಮುಚ್ಚಬೇಕು ಮತ್ತು ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು.

ಹುಬ್ಬಳ್ಳಿ: ನಗರದಲ್ಲಿ ಗಣೇಶ ಮೂರ್ತಿ ಮೆರವಣಿಗೆಯ ಸಮಯದಲ್ಲಿ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ಅಧಿಕಾರಿಗಳಿಗೆ ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ ನೀಡಿದರು.

ನಗರದ ಸರ್ಕೂಟ್‌ ಹೌಸ್‌ನಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಗಣೇಶ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. 11 ದಿನಗಳ ಕಾಲ ಉತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು. ಗಣೇಶ ಮೆರವಣಿಗೆ ನಡೆಯುವ ಮಾರ್ಗಗಳಲ್ಲಿ ಗುಂಡಿಗಳನ್ನು ಮುಚ್ಚಬೇಕು ಮತ್ತು ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಹೆಸ್ಕಾಂ ರಾತ್ರಿಯ ಸಮಯದಲ್ಲಿ ವಿದ್ಯುತ್ ಕಡಿತಗೊಳಿಸಬಾರದು. ಹಿಂದೆಯೂ ಇಂತಹ ಘಟನೆ ನಡೆದಿತ್ತು. ಆದ್ದರಿಂದ, ಯಾವುದೇ ಅಡೆತಡೆಯಿಲ್ಲದೆ ವಿದ್ಯುತ್ ಸರಬರಾಜು ಮಾಡಬೇಕು. ಮೂರ್ತಿಗಳ ವಿಸರ್ಜನೆಗೆ ಸಮರ್ಪಕ ವ್ಯವಸ್ಥೆ ಮಾಡಬೇಕು. ವಿಸರ್ಜನಾ ಬಾವಿಗಳನ್ನು ಸ್ವಚ್ಛಗೊಳಿಸಬೇಕು ಮತ್ತು ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಮಾತನಾಡಿ, ಅಧಿಕಾರಿಗಳು ಮತ್ತು ಗಣೇಶ ಮಂಡಳಿಗಳೊಂದಿಗೆ ನಾವು ಅನೇಕ ಸಭೆಗಳನ್ನು ನಡೆಸಿದ್ದೇವೆ. ಮನೆಗಳು ಮತ್ತು ಸಾರ್ವಜನಿಕ ಗಣೇಶೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಎಚ್‌ಡಿಎಂಸಿ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, ಪಾಲಿಕೆ ನಗರದಲ್ಲಿನ ಗುಂಡಿಗಳನ್ನು ಮುಚ್ಚುತ್ತಿದೆ. ವಿಶೇಷವಾಗಿ ಗಣೇಶ ಮೆರವಣಿಗೆ ನಡೆಯುವ ಸ್ಥಳಗಳಲ್ಲಿ ಕಾರ್ಯ ನಡೆಯುತ್ತಿದೆ. ಉತ್ಸವದ ಸಮಯದಲ್ಲಿ ಪಾಲಿಕೆ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದರು.

ಉಪ ಮೇಯರ್ ಸಂತೋಷ್ ಚವ್ಹಾಣ್ ಮತ್ತು ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ