ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಚಿಕ್ಕಮಂಡ್ಯ ಪ್ರೌಢಶಾಲೆಗೆ ಹತ್ತಿರದ ಗ್ರಾಮಗಳಿಂದ ವಿದ್ಯಾರ್ಥಿಗಳನ್ನು ಆಟೋ ಮೂಲಕ ಕರೆತರುವ ಕಾರ್ಯಕ್ರಮಕ್ಕೆ ಸಾತನೂರಿನಲ್ಲಿ ಚಾಲನೆ ನೀಡಿ ಮಾತನಾಡಿದರು. ಮುಂದಿನ ಹಂತದಲ್ಲಿ ಶಾಲೆಗೆ ಆಟೋ ಹಾಗೂ ಬಸ್ ವ್ಯವಸ್ಥೆಯನ್ನು ಮಾಡುವುದಾಗಿ ಭರವಸೆ ನೀಡಿದರು.
ಚಿಕ್ಕಮಂಡ್ಯದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಸುರಕ್ಷಿತ ಪ್ರಯಾಣ ಮತ್ತು ಶಾಲಾ ಹಾಜರಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ, ದೂರದ ಊರುಗಳಿಂದ ಬರುವ ಮಕ್ಕಳಿಗೆ ಸಾರಿಗೆ ಸೌಲಭ್ಯದ ಕೊರತೆಯಿಂದಾಗಿ ತೊಂದರೆಯಾಗುತ್ತಿದೆ. ಮಂಡ್ಯ- ಯಡಿಯೂರು ಮುಖ್ಯ ರಸ್ತೆಗಳಲ್ಲಿ ಬೆಳಗಿನ ಶಾಲಾ ವೇಳೆಯಲ್ಲಿ ವಾಹನ ದಟ್ಟಣೆಯಿಂದ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಆತಂಕಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆಗೆ ಬಂದು ಕಲಿಯುವಂತೆ ಪ್ರೇರೇಪಿಸಲು ಆಟೋ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಟ್ರಸ್ಟ್ ವತಿಯಿಂದ ಬಸ್ ವ್ಯವಸ್ಥೆ ಮಾಡಿಕೊಡುತ್ತೇನೆ. ಶಿಕ್ಷಣ ಪ್ರತಿಯೊಬ್ಬ ಮಗುವಿನ ಹಕ್ಕು. ಅದಕ್ಕೆ ಸಾರಿಗೆ ಅಡ್ಡಿಯಾಗಬಾರದು ಎಂದು ತಿಳಿಸಿದರು.ಶಾಲೆಯ ಮುಖ್ಯ ಶಿಕ್ಷಕ ಎಚ್.ಎನ್.ದೇವರಾಜು ಮಾತನಾಡಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕಡೆಗೆ ವಿನಯ್‌ಕುಮಾರ್ ಅವರು ತೋರಿರುವ ಈ ಕಾಳಜಿ ಶ್ಲಾಘನೀಯ. ಈಗ ವಿದ್ಯಾರ್ಥಿಗಳು ನಿರ್ಭೀತಿಯಿಂದ ಸಮಯಕ್ಕೆ ಸರಿಯಾಗಿ ಶಾಲೆಗೆ ಬರುತ್ತಿದ್ದಾರೆ. ಇದು ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಳ್ಳಲು ದೊಡ್ಡಮಟ್ಟದ ಉತ್ತೇಜನ ನೀಡಿದಂತಾಗಿದೆ ಎಂದು ನುಡಿದರು.