4 ಚಿನ್ನದ ಪದಕಕ್ಕೆ ಮುತ್ತಿಟ್ಟ ಆಟೋ ಚಾಲಕನ ಪುತ್ರಿ!

KannadaprabhaNewsNetwork |  
Published : Nov 17, 2026, 02:00 AM IST
ಬಳ್ಳಾರಿಯ ಆಟೋ ಚಾಲಕನ ಪುತ್ರಿ ಸವಿತಾ ಅವರು ವಾಣಿಜ್ಯಶಾಸ್ತ್ರ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಪೋಷಕರು ಮಗಳ ಸಾಧನೆಯನ್ನು ಸಂಭ್ರಮಿಸಿದರು.  | Kannada Prabha

ಸಾರಾಂಶ

ಸವಿತಾ, ತಮ್ಮ ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಆರಂಭದಿಂದಲೂ ಓದಿನಲ್ಲಿ ಆಸಕ್ತಿ, ಶಿಸ್ತು ಹಾಗೂ ಪರಿಶ್ರಮಕ್ಕೆ ಆದ್ಯತೆ ನೀಡುತ್ತಿದ್ದ ಅವರು, ಪ್ರತಿ ಹಂತದಲ್ಲೂ ಉತ್ತಮ ಅಂಕಗಳನ್ನು ಗಳಿಸುತ್ತಾ ಬಂದಿದ್ದಾರೆ.

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸೋಮವಾರ ಜರುಗಿದ 14ನೇ ಘಟಿಕೋತ್ಸವದಲ್ಲಿ ನಗರದ ಆಟೋ ಚಾಲಕ ಚಂದ್ರಶೇಖರ್‌ ಮತ್ತು ಲಕ್ಷ್ಮಿ ದಂಪತಿಯ ಪುತ್ರಿ ಸವಿತಾ ಅವರು ಸ್ನಾತಕೋತ್ತರ ಪದವಿಯಲ್ಲಿ ನಾಲ್ಕು ಚಿನ್ನದ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಗಮನಾರ್ಹ ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ.

ನಗರದ ಶ್ರೀಗುರು ತಿಪ್ಪೇರುದ್ರ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸವಿತಾ, ತಮ್ಮ ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಆರಂಭದಿಂದಲೂ ಓದಿನಲ್ಲಿ ಆಸಕ್ತಿ, ಶಿಸ್ತು ಹಾಗೂ ಪರಿಶ್ರಮಕ್ಕೆ ಆದ್ಯತೆ ನೀಡುತ್ತಿದ್ದ ಅವರು, ಪ್ರತಿ ಹಂತದಲ್ಲೂ ಉತ್ತಮ ಅಂಕಗಳನ್ನು ಗಳಿಸುತ್ತಾ ಬಂದಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90, ಪಿಯುಸಿ ಪರೀಕ್ಷೆಯಲ್ಲಿ ಶೇ.91 ಹಾಗೂ ಪದವಿ ಪರೀಕ್ಷೆಯಲ್ಲಿ ಶೇ.94ರಷ್ಟು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದರು. ಇದೀಗ ಸ್ನಾತಕೋತ್ತರ ಪದವಿಯಲ್ಲಿಯೂ ಅತ್ಯುತ್ತಮ ಸಾಧನೆ ಮಾಡಿ ನಾಲ್ಕು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಸವಿತಾ ಅವರ ಈ ಸಾಧನೆ ಪೋಷಕರಲ್ಲಿ ಅಪಾರ ಸಂತಸ ಮೂಡಿಸಿದೆ. ಮಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆಟೋ ಚಾಲಕ ತಂದೆ ಚಂದ್ರಶೇಖರ್‌ ಹಾಗೂ ತಾಯಿ ಲಕ್ಷ್ಮಿ ಅವರ ಪರಿಶ್ರಮ ಮತ್ತು ಬೆಂಬಲವೂ ಈ ಯಶಸ್ಸಿನ ಹಿಂದೆ ಮಹತ್ವದ ಪಾತ್ರ ವಹಿಸಿದೆ. ಪ್ರಸ್ತುತ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯಲ್ಲಿ ತೊಡಗಿರುವ ಸವಿತಾ ಅವರು ಭವಿಷ್ಯದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಗುರಿ ಹೊಂದಿದ್ದಾರೆ. ಪರಿಶ್ರಮ, ನಿರಂತರ ಅಧ್ಯಯನ ಹಾಗೂ ಆತ್ಮವಿಶ್ವಾಸದಿಂದ ಸಾಧನೆಯ ಶಿಖರವೇರಿರುವ ಸವಿತಾ ಅವರ ಯಶಸ್ಸು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ.

ವಿದ್ಯಾರ್ಥಿಗಳೊಂದಿಗೆ ಬೆರೆತ ರಾಜ್ಯಪಾಲರು!

ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬಳ್ಳಾರಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡ ಡಾ. ಸುಧಾ ಯಾದವ್ ಅವರು ಇಡೀ ಕಾರ್ಯಕ್ರಮದುದ್ದಕ್ಕೂ ಲವಲವಿಕೆಯಿಂದ ಗಮನ ಸೆಳೆದರು.

ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪಿಎಚ್‌ಡಿ ಪದವಿ ಪ್ರದಾನ ಮಾಡುವ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ನಗುನಗುತ್ತಲೇ ಶುಭ ಹಾರೈಸಿದರು. ಕೆಲ ಪಿಎಚ್‌ಡಿ ಪದವೀಧರರು ರಾಜ್ಯಪಾಲರೊಂದಿಗೆ ಫೋಟೊ ತೆಗೆಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದಾಗ, ಸಂತೋಷದಿಂದಲೇ ''''''''ಬನ್ನಿ, ಬನ್ನಿ'''''''' ಎಂದು ಆತ್ಮೀಯವಾಗಿ ಆಹ್ವಾನಿಸಿ ಫೋಟೊ ತೆಗೆಸಿಕೊಂಡರು. ರಾಜ್ಯಪಾಲರ ಈ ಸರಳತೆ ಮತ್ತು ಆತ್ಮೀಯ ವರ್ತನೆ ವಿದ್ಯಾರ್ಥಿಗಳು ಹಾಗೂ ಪೋಷಕರ ಮೊಗದಲ್ಲಿ ಸಂತಸ ಮೂಡಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶೀಯ ಕ್ರೀಡೆಗಳಿಂದ ಆರೋಗ್ಯ: ಹನುಮಂತಗೌಡ ಎಂ. ಗುಡಿಹಿಂದಿನ
ಯೋಗಾಸನ ಸ್ಪರ್ಧೆ: ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ