ಆಟೋ ಚಾಲಕ ಮುಹಮ್ಮದ್ ಶರೀಫ್ ಅವರನ್ನು ಮಂಜೇಶ್ವರ ಸಮೀಪ ಕೊಂದು ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಯನ್ನು ಕಾಸರಗೋಡು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿಯ ನಿವಾಸಿ, ಆಟೋ ಚಾಲಕ ಮುಹಮ್ಮದ್ ಶರೀಫ್ ಅವರನ್ನು ಮಂಜೇಶ್ವರ ಸಮೀಪ ಕೊಂದು ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಯನ್ನು ಕಾಸರಗೋಡು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಭಿಷೇಕ್ ಶೆಟ್ಟಿ ಸುರತ್ಕಲ್ ನಿವಾಸಿಯಾಗಿದ್ದು, ಮಂಗಳೂರಿನ ಶಾಲೆಯೊಂದರ ಬಸ್ಸು ಚಾಲಕನಾಗಿದ್ದ ಸಂದರ್ಭ ಉಂಟಾದ ಪೂರ್ವ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಭಿಷೇಕ್ ಶೆಟ್ಟಿ ಗಾಂಜಾ ಪ್ರಕರಣದ ಆರೋಪಿಯಾಗಿದ್ದು, ಈತನ ವಿರುದ್ಧ ಮೂರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು ಕೊಲೆ ಕೃತ್ಯದಲ್ಲಿ ಸ್ಥಳೀಯರ ಅಥವಾ ಇತರರ ಕೈವಾಡದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
9ರಂದು ರಾತ್ರಿಯಿಂದ ನಾಪತ್ತೆಯಾಗಿದ್ದ ಮುಹಮ್ಮದ್ ಶರೀಫ್ ಮೃತದೇಹ 10ರಂದು ರಾತ್ರಿ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿತ್ತು. ಕೊಂದು ಬಾವಿಗೆ ಎಸೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮಂಜೇಶ್ವರ ಠಾಣಾ ಪೊಲೀಸರಿಗೆ ಮಂಗಳೂರಿನಿಂದ ರಿಕ್ಷಾವನ್ನು ಬಾಡಿಗೆಗೆ ಪಡೆದು ತೆರಳಿರುವ ಮಾಹಿತಿ ಲಭಿಸಿದ್ದು ಶರೀಫ್ ಅವರ ಆಟೋ ರಿಕ್ಷಾ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಂಜೇಶ್ವರ ಕಡೆಗೆ ಬರುತ್ತಿರುವುದು ತಲಪಾಡಿ ಟೋಲ್ ಗೇಟಿನ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿತ್ತು.
ಈ ಎಲ್ಲಾ ಮಾಹಿತಿಗಳನ್ನು ಆಧರಿಸಿ ಸಿ ತನಿಖೆ ಮುಂದುವರಿಸಿರುವ ಪೊಲೀಸರು ಆರೋಪಿ ಅಭಿಷೇಕ್ ಶೆಟ್ಟಿಯನ್ನು ಬಂಧಿಸಿ ನಡೆಸುತಿದ್ದಾರೆ. ಶರೀಫ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.