ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯ ಬದಿಯಲ್ಲಿ ಆಟೋಗಳಿಗೆ ನಿಲುಗಡೆ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಇಲ್ಲಿನ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದ್ದಾರೆ. ಇಲ್ಲಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿದ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಬೇಡಿಕೆಗಳಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಪಟ್ಟಣದ ಮುಖ್ಯ ರಸ್ತೆಯ ಬದಿಯಲ್ಲಿ ಆಟೋಗಳಿಗೆ ನಿಲುಗಡೆ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಇಲ್ಲಿನ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದ್ದಾರೆ. ಇಲ್ಲಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿದ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಬೇಡಿಕೆಗಳಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪಟ್ಟಣದಲ್ಲಿ 200 ಕೂ ಅಧಿಕ ಆಟೋಗಳಿದ್ದು ನಿಲುಗಡೆಗೆ ಸಮಸ್ಯೆಯಾಗುತ್ತಿದೆ. ಸ್ಥಳಾವಕಾಶ ಸಾಕಾಗುತ್ತಿಲ್ಲ. ಮುಖ್ಯ ರಸ್ತೆಯಲ್ಲೂ ಆಟೋ ನಿಲುಗಡೆಗೆ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಈ ಹಿಂದೆ ಗ್ರಾಮ ಪಂಚಾಯಿತಿ
ಹಾಗೂ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ ಗಡುವು ವಿಧಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಪಂಚಾಯಿತಿ ಪ್ರತಿನಿಧಿಗಳು ಮತ್ತು ಠಾಣಾಧಿಕಾರಿ ಮಂಜುನಾಥ್ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ಬಗ್ಗೆ ಹಲವು ಸಮಸ್ಯೆಗಳಿದ್ದು ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಠಾಣಾಧಿಕಾರಿ ಭರವಸೆ ನೀಡಿದರು.
ಪಂಚಾಯತಿ ಸದಸ್ಯರಾದ ಮಹಮ್ಮದ್ ಖುರೇಶಿ, ಶಿವಚಳಿಯಂಡ ಜಗದೀಶ್, ಮಾಚೇಟಿರ ಕುಸು ಕುಶಾಲಪ್ಪ, ಬಿ ಎಂ ಪ್ರತೀಪ, ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುಕುಮಾರ್, ಉಪಾಧ್ಯಕ್ಷ ರಾಶಿದ್, ಕಾರ್ಯದರ್ಶಿ ಸತೀಶ್, ಮಾಜಿ ಅಧ್ಯಕ್ಷ ರಜಾಕ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.