ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಆಂಡ್ ಅಜೀವಿಕಾ ಮಿಷನ್ ಗ್ರಾಮೀಣ ಯೋಜನೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ 196 ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಂಡ ಜಾಗೃತಿ ಅಭಿಯಾನಕ್ಕೆ ಡಿಸಿ ಸಂಗಪ್ಪ ಹಾಗೂ ಜಿಪಂ ಸಿಇಒ ಗಜಾನನ ಬಾಲೆ ಶನಿವಾರ ಚಾಲನೆ ನೀಡಿದರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಆಂಡ್ ಅಜೀವಿಕಾ ಮಿಷನ್ ಗ್ರಾಮೀಣ ಯೋಜನೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ 196 ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಂಡ ಜಾಗೃತಿ ಅಭಿಯಾನಕ್ಕೆ ಡಿಸಿ ಸಂಗಪ್ಪ ಹಾಗೂ ಜಿಪಂ ಸಿಇಒ ಗಜಾನನ ಬಾಲೆ ಶನಿವಾರ ಚಾಲನೆ ನೀಡಿದರು.ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯತಿ, ತಾಲೂಕಾ ಪಂಚಾಯತಿಯ ಮಾಹಿತಿ, ಶಿಕ್ಷಣ, ಸಂವಹನ ಚಟುವಟಿಕೆಯಡಿ ಹಮ್ಮಿಕೊಂಡ ಜಾಗೃತಿ ಅಭಿಯಾನಕ್ಕೆ ಮುರನಾಳ.ಆರ್.ಸಿ ಕೇಂದ್ರದಲ್ಲಿ ಚಾಲನೆ ನೀಡಿ ಮಾತನಾಡಿದ ಡಿಸಿ ಸಂಗಪ್ಪ, ಗ್ರಾಮೀಣ ಕುಟುಂಬಗಳು ತಮ್ಮ ಜೀವನೋಪಾಯವನ್ನು ಸುಸ್ಥಿರಗೊಳಿಸಿಕೊಳ್ಳಲು ಹಾಗೂ ಜಲ ಭದ್ರತೆಗೆ ಅಗತ್ಯವಾದ ಆಸ್ತಿಗಳನ್ನು ನಿರ್ಮಿಸಿಕೊಳ್ಳಲು ವಿಬಿಜಿ-ರಾಮ್‌ಜಿ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಮಾತನಾಡಿ, ಜಿಲ್ಲೆಯ 196 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಜನರಿಗೆ ವಿಬಿಜಿ-ರಾಮ್‌ಜೀ ಯೋಜನೆಯಡಿ ದೊರೆಯುವ ಸೌಲಭ್ಯಗಳು, ಕೈಗೊಳ್ಳಬಹುದಾದ ಕಾಮಗಾರಿಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಯೋಜನೆಯ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಗ್ರಾಮ ಮಟ್ಟದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಬಾಗಲಕೋಟೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ವಿಬಿಜಿ-ರಾಮ್‌ಜೀ ಯೋಜನೆಯ ಸಹಾಯಕ ನಿರ್ದೇಶಕ ನಕ್ಕರಗುಂದಿ, ತಾಪಂ ಸಹಾಯಕ ನಿರ್ದೇಶಕ ಪರಮೇಶ್ವರ ಚಲವಾದಿ, ತಾಲೂಕಾ ಯೋಜನಾಧಿಕಾರಿ ಚಂದ್ರು ಹೊಸಮನಿ, ಪಂಚಾಯತಿ ಅಭಿವೃದ್ದಿ ಅಧಿಕಾರಿ ಸ್ವಪ್ನ ನಾಯಕ ಸೇರಿದಂತೆ ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಇದ್ದರು.
ವಿಬಿಜಿ-ರಾಮ್‌ಜೀ ಯೋಜನೆಯಡಿ ಗ್ರಾಮೀಣ ನಾಗರಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಮಾಹಿತಿ ನೀಡಲಾಯಿತು. ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳು, ಗ್ರಾಮೀಣ ಕುಟುಂಬಗಳ ಜೀವನೋಪಾಯ ಸುಧಾರಣೆ ಹಾಗೂ ಜಲ ಭದ್ರತೆಗೆ ಆಸ್ತಿಗಳನ್ನು ನಿರ್ಮಿಸಿಕೊಳ್ಳುವ ಕುರಿತು ವಿವರಿಸಿ, ಮಾಹಿತಿ ಒಳಗೊಂಡ ಕರಪತ್ರಗಳನ್ನು ಮನೆ ಮನೆಗೆ ವಿತರಿಸಲಾಯಿತು.
----
ಬಾಕ್ಸ್ ಗಮನ ಸೆಳೆದ ಡಿಸಿ, ಸಿಇಒ ಬೈಕ್ ಸವಾರಿ
ಮುರನಾಳ ಆರ್.ಸಿ ಕೇಂದ್ರದಲ್ಲಿ ವಿಬಿಜಿ-ರಾಮ್‌ಜೀ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಒ ಅವರು ಬೈಕ್‌ನಲ್ಲಿ ಗ್ರಾಮದಲ್ಲಿ ಸಂಚರಿಸಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿದರು. ಅಧಿಕಾರಿಗಳು ಬೈಕ್‌ನಲ್ಲಿ ಜಾಥಾ ನಡೆಸುತ್ತಿರುವುದು ಸಾರ್ವಜನಿಕರ ಗಮನ ಸೆಳೆಯಿತು. ಈ ಮೂಲಕ ಗ್ರಾಮೀಣ ಜನರೊಂದಿಗೆ ನೇರವಾಗಿ ಬೆರೆತು ಯೋಜನೆ ಮಹತ್ವವನ್ನು ತಿಳಿಸುವ ಸಂದೇಶ ನೀಡಲಾಯಿತು. .
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.