ಹೊಸಕೋಟೆ: ನಗರದ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು.
ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಅವಿಮುಕ್ತೇಶ್ವರ ಸ್ವಾಮಿ ಹೊಸಕೋಟೆ ಜನರ ಕಷ್ಟಗಳ ನಿವಾರಣೆ ಆರಾಧ್ಯ ದೈವವಾಗಿದ್ದು, ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದರೆ ಮನಸ್ಸಿಗೆ ನೆಮ್ಮದಿ ಜೊತೆಗೆ ಕಷ್ಟಗಳು ದೂರಾಗುತ್ತವೆ ಎಂಬುದು ಪ್ರತೀತಿ. ಲೋಕ ಕಲ್ಯಾಣಾರ್ಥ ದೇವರಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿದ್ದೇನೆ.
ಅವಿಮುಕ್ತೇಶ್ವರ ಸಕಲ ಜೀವರಾಶಿಗಳಿಗೂ ಒಳಿತನ್ನು ಮಾಡಲಿ ಎಂದರು. ರಥೋತ್ಸವಕ್ಕೆ ಪ್ರತಿ ವರ್ಷದಂತೆ ಈ ವರ್ಷ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಳೆಹಣ್ಣು ಎಸೆದು ಹರಕೆ ತೀರಿಸಿದರು.ಕಲಾತಂಡಗಳ ಮೆರುಗು:
ಹೊಸಕೋಟೆಯಲ್ಲಿ ಇತಿಹಾಸ ಪ್ರಸಿದ್ದ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.( ಈ ಫೋಟೊವನ್ನು ಪ್ಯಾನಲ್‌ನಲ್ಲಿ ಬಳಸಿ)
ಫೋಟೋ: 23 ಹೆಚ್‌ಎಸ್‌ಕೆ 3ಹೊಸಕೋಟೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ ಕುಟುಂಬ ಸಮೇತ ಆಗಮಿಸಿ ಅವಿಮುಕ್ತೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರಾಜಕೀಯ ಮುಖಂಡರು ಹಾಜರಿದ್ದರು.