ನರಗುಂದ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಶೀಘ್ರ ಜಾರಿ ಮಾಡಿ, ಈ ಭಾಗದ ಜನರ ಕುಡಿಯುವ ನೀರಿನ ಬವಣೆ ತಪ್ಪಿಸಿ ಎಂದು ರೈತ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.
ಈ ಯೋಜನೆ ಜಾರಿಗಾಗಿ ರೈತರು ಒಂಭತ್ತು ವರ್ಷಗಳಿಂದ ಸತತ ಹೋರಾಟ ಮಾಡುತ್ತಿದ್ದಾರೆ. ಆದರೆ ಕೇಂದ್ರ, ರಾಜ್ಯ ಸರ್ಕಾರಗಳು ಯೋಜನೆ ಜಾರಿ ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದ ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆಗಳಲ್ಲಿ ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ಸರ್ಕಾರ ಈ ನಾಲ್ಕು ಹಳ್ಳಗಳಲ್ಲಿ ಹರಿಯುವ 7.5 ಟಿಎಂಸಿ ನೀರನ್ನು ಮಲಪ್ರಭಾ ಜಲಾಶಯಕ್ಕೆ ತಂದು ಜೋಡಣೆ ಮಾಡಿದರೆ ಈ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿ ಅವರು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಂಧಾನದ ಮೂಲಕ ಈ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು.
ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ರಾಘವೇಂದ್ರ ಗುಜಮಾಗಡಿ, ಸುಭಾಸ ಗಿರಿಯಣ್ಣವರ, ಹನುಮಂತ ಸರನಾಯ್ಕರ, ಸೋಮಲಿಂಗಪ್ಪ ಆಯಿಟ್ಟಿ, ಅರ್ಜುನ ಮಾನೆ, ಯಲ್ಲಪ್ಪ ಚಲವಣ್ಣವರ, ಶಂಕ್ರಪ್ಪ ಜಾಧವ, ಶಿವಪ್ಪ ಸಾತಣ್ಣವರ, ಅನಸವ್ವ ಶಿಂದೆ, ನಾಗರತ್ನಾ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಇದ್ದರು.