ಕನ್ನಡಪ್ರಭ ವಾರ್ತೆ ಶಿವಮೊಗ್ಗ: ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಏ.18 ರಂದು ಬೆಳಗ್ಗೆ 10.30ಕ್ಕೆ ಹೋಟೆಲ್ ಮಥುರಾ ಪ್ಯಾರಡೈಸ್ ನಲ್ಲಿ ಭೂ-ಒಡೆತನದ ಹಕ್ಕಿಗಾಗಿ ನಡೆದ ಐತಿಹಾಸಿಕ ಕಾಗೋಡು ಸತ್ಯಾಗ್ರಹದ 74 ನೇ ವರ್ಷದ ನೆನಪಿನಲ್ಲಿ ಸಮಾಜವಾದಿ ಧುರೀಣ, ಕನ್ನಡಪರ ಹೋರಾಟಗಾರ ಹಾಗೂ ಪ್ರತಿಷ್ಠಿತ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಕೋಣಂದೂರು ಲಿಂಗಪ್ಪನವರಿಗೆ ಕನ್ನಡಪರ ಹೋರಾಟದ ಕಿಡಿ” ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾಜಿ ಶಾಸಕ ಬಿ.ಸ್ವಾಮಿರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ , ಶಾಸಕಿ ಶಾರದಾ ಪೂರ್ಯಾನಾಯ್ಕ್ , ಹಿರಿಯ ಸಮಾಜವಾದಿ ಪಿ.ಪುಟ್ಟಯ್ಯ ಪಾಲ್ಗೊಳ್ಳುವರು.