ನಾಪೋಕ್ಲು: ಸ್ಥಳೀಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕರಾಟೆ ಮತ್ತು ಯೋಗ ಚಾಂಪಿಯನ್‌ಷಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ್ದಾರೆ.ಕುಶಾಲನಗರ ರೈತ ಭವನದಲ್ಲಿ ನಡೆದ 2025-26ನೇ ಸಾಲಿನ ರಾಜ್ಯ ಮಟ್ಟದ ಕರಾಟೆ ಮತ್ತು ಯೋಗ ಚಾಂಪಿಯನ್‌ಷಿಪ್ ಸ್ಪರ್ಧೆಯಲ್ಲಿ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 63 ವಿದ್ಯಾರ್ಥಿನಿಯರು ಭಾಗವಹಿಸಿದ್ದು, 18 ವಿದ್ಯಾರ್ಥಿನಿಯರು ಚಿನ್ನದ ಪದಕ, 22 ವಿದ್ಯಾರ್ಥಿನಿಯರು ಬೆಳ್ಳಿ ಪದಕ ಮತ್ತು 23 ವಿದ್ಯಾರ್ಥಿನಿಯರು ಕಂಚಿನ ಪದಕ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.